ಕುಶಾಲನಗರ, ಅ. 22: ನವರಾತ್ರಿ ಅಂಗವಾಗಿ ಕುಶಾಲನಗರದ ವಿವಿಧೆಡೆ ಗೊಂಬೆಗಳನ್ನು ಕೂರಿಸಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯ, ಶ್ರೀ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘ ಮತ್ತು ಪಟ್ಟಣದ ಕೆಲವು ಮನೆಗಳಲ್ಲಿ ಬೊಂಬೆಗಳನ್ನು ಕೂರಿಸಿ ಪೂಜಿಸಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ದಸರಾ ಸಂದರ್ಭದ ಆಚರಣೆಗಳು ಬಹುತೇಕ ಕ್ಷೀಣಿಸಿದ ದೃಶ್ಯ ಕಾಣಬಹುದು.