ಮಡಿಕೇರಿ, ಅ.23 : ನಗರದ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ಕರುನಾಡ ವೀರ ಮಾತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತ್ಯುತ್ಸವವನ್ನು ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ಪುಷ್ಪಾರ್ಚನೆ ಮಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ ಇತರರು ಇದ್ದರು.