ಗುಡ್ಡೆಹೊಸೂರು, ಅ. 23: ಕರ್ನಾಟಕ ರಾಜ್ಯ ಗ್ರಾ.ಪಂ. ನೌಕರರ ಸಂಘದ ರಾಜ್ಯ ಅಧ್ಯಕ್ಷ ಮಾರುತಿ ಮಾನಪಡೆ ಅವರು ಅನಾರೋಗ್ಯದ ಹಿನ್ನಲೆ ತಾ. 20 ರಂದು ಮುಂಜಾನೆ ನಿಧನರಾದರು.

ಈ ಹಿನ್ನೆಲೆ ಕೊಡಗು ಜಿಲ್ಲಾ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಗುಡ್ಡೆಹೊಸೂರಿನ ಸಮುದಾಯ ಭವನದಲ್ಲಿ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಹಾಜರಿದ್ದ ಕೊಡಗು ಜಿಲ್ಲಾ ಸಂಘದ ಅಧ್ಯಕ್ಷ ಭರತ್ ಮಾತನಾಡಿ, ಮಾರುತಿ ಮಾನಪಡೆಯವರ ಜೀವನ ಚರಿತ್ರೆಯನ್ನು ಸಭೆಗೆ ತಿಳಿಸಿದರು. ಈ ಸಂದರ್ಭ ಜಿಲ್ಲಾ ಸಂಘದ ಕಾರ್ಯದರ್ಶಿ ಉಮೇಶ್, ತಾಲೂಕು ಕಾರ್ಯದರ್ಶಿ ವಿಜಯ್, ತಾಲೂಕು ಅಧ್ಯಕ್ಷ ಹೆಚ್.ಜಿ. ನವೀನ್, ಜಿಲ್ಲಾ ಸಮಿತಿ ಸದಸ್ಯರಾದ ಎ. ಅಣ್ಣಪ್ಪ, ಪೂರ್ಣಿಮ, ಸುಮಾ, ಬಿ.ಆರ್. ಅನಿಲ್‍ಕುಮಾರ್ ಮತ್ತು ಪೌರಕಾರ್ಮಿಕರು ಹಾಜರಿದ್ದರು.