ಮಡಿಕೇರಿ, ಅ. 23: ತಾ. 26ರಂದು ಮಡಿಕೇರಿ ನಗರದಲ್ಲಿ ದಸರಾ ಆಚರಣೆ ನಡೆಸಲಾಗುತ್ತಿದ್ದು, ಈ ಸಂಬಂಧ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮಡಿಕೇರಿ ನಗರದಲ್ಲಿ ತಾ. 25ರ ಬೆಳಿಗ್ಗೆ 6 ಗಂಟೆಯಿಂದ ತಾ. 27ರಂದು ಬೆಳಿಗ್ಗೆ 6 ಗಂಟೆಯವರೆಗೆ ಮಡಿಕೇರಿ ನಗರದ ಎಲ್ಲಾ ಮದ್ಯದ ಅಂಗಡಿಗಳು ಬಾರ್ ಮತ್ತು ರೆಸ್ಟೋರೆಂಟ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇದಿಸಿ ಆದೇಶ ಹೊರಡಿಸಿರುವುದಾಗಿ ಆರಕ್ಷಕ ಅಧೀಕ್ಷಕರು ಕೋರಿರುತ್ತಾರೆ.
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಆರಕ್ಷಕ ಅಧೀಕ್ಷಕರ ಕೋರಿಕೆಯಂತೆ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಅಬಕಾರಿ ಕಾಯ್ದೆ 1965ರ ಕಲಂ 23ರಲ್ಲಿ ದತ್ತವಾಗಿರುವ ಅಧಿಕಾರ ಚಲಾಯಿಸಿ ಅನೀಸ್ ಕಣ್ಮಣಿ ಜಾಯ್, ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶ ಹರಡಿಸಿದ್ದಾರೆ.