ಮಡಿಕೇರಿ, ಅ.23 : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯರು 96 ಲಕ್ಷ ರೂ. ವೆಚ್ಚದಲ್ಲಿ 6 ಕೊಠಡಿ ಒಳಗೊಂಡ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಕೇಂದ್ರ ಸ್ಥಾನವಾದ ಮಡಿಕೇರಿ, ಅ.23 : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯರು 96 ಲಕ್ಷ ರೂ. ವೆಚ್ಚದಲ್ಲಿ 6 ಕೊಠಡಿ ಒಳಗೊಂಡ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಕೇಂದ್ರ ಸ್ಥಾನವಾದ ಉಮಾದೇವಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಹಾಲಿಂಗಯ್ಯ, ಪ್ರಾಂಶುಪಾಲರಾದ ವಿಜಯ, ಉಪನ್ಯಾಸಕರಾದ ಚಿದಾನಂದ್, ಮಹಾಂತೇಶ್, ಸಿದ್ದರಾಜು ಬೆಳ್ಳಯ್ಯ, ಲೋಕೋಪ ಯೋಗಿ ಇಲಾಖೆ ಎಂಜಿನಿಯರ್ ದೇವರಾಜ್ ಇತರರು ಇದ್ದರು.
ಇನ್ನಿತರ ಅಭಿವೃದ್ಧಿ
ಪ್ರಾಂಶುಪಾಲರಾದ ವಿಜಯನ್ ಅವರು ‘ಶಕ್ತಿ’ಯೊಂದಿಗೆ ಮಾತನಾಡಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಗತಿಯಲ್ಲಿರುವ ಇತರ ಕಾಮಗಾರಿಗಳ ಬಗ್ಗೆ ಮಾಹಿತಿಯಿತ್ತರು. ರೂ. 7 ಲಕ್ಷವನ್ನು ಜಿಲ್ಲಾಧಿಕಾರಿಯವರು ಮಂಜೂರು ಮಾಡಿದ್ದು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದ ದುರಸ್ತಿ ಕೈಗೊಳ್ಳಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ಬಿಡುಗಡೆಗೊಳಿಸಿದ ರೂ. 5.80 ಲಕ್ಷದಲ್ಲಿ ಜಿಮ್ ಕೇಂದ್ರವನ್ನು ಸಮರ್ಪಗೊಳಿಸಲಾಗುತ್ತಿದೆ. ವಿಧಾನಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ತಮ್ಮ ನಿಧಿಯಿಂದ ಬಿಡುಗಡೆಗೊಳಿಸಿದ ಹಣದಲ್ಲಿ ರಸ್ತೆ ನಿರ್ಮಾಣಗೊಳಿಸಲಾಗುತ್ತಿದೆ. ಎ.ಡಿ.ಸಿ. ಅವರು ಪ್ರಾಕೃತಿಕ ವಿಕೋಪ ದಡಿ ಮಂಜೂರು ಮಾಡಿರುವ ರೂ. 4 ಲಕ್ಷದಲ್ಲಿ ಪ್ರಾಂಶುಪಾಲರು ಮತ್ತು ಉಪಪ್ರಾಂಶುಪಾಲರ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ವಿವರಿಸಿದರು.