ಮಡಿಕೇರಿ, ಅ. 23: ಬೆಂಗಳೂರು ನಗರದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯರಾಗಿರುವ ಕಾಂಗ್ರೆಸ್‍ನ ವೀಣಾ ಅಚ್ಚಯ್ಯ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಸಹ ಅಧ್ಯಕ್ಷರಾಗಿ ಕೃಷ್ಣ ಭೈರೇಗೌಡ ಅವರಿದ್ದು, ಇವರೊಂದಿಗೆ ವೀಣಾ ಅವರನ್ನು ವೀಕ್ಷಕರನ್ನಾಗಿ ನೇಮಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ.