ಮಡಿಕೇರಿ, ಅ. 23: ಮಹದೇವ ಪೇಟೆ ಮಹಿಳಾ ಸಹಕಾರ ಸಂಘದಲ್ಲಿ ದಸರಾ ಪ್ರಯುಕ್ತ ಶಾರದಾ ಪೂಜೆ ಮತ್ತು ಆಯಧ ಪೂಜೆಯನ್ನು ಸರಳವಾಗಿ ಆಚರಿಸಲಾಯಿತು. ಸಂಘದ ಅಧ್ಯಕ್ಷೆ ಸವಿತಾ ಭಟ್ ಮತ್ತು ಆಡಳಿತ ಮಂಡಳಿಯ ಸದಸ್ಯೆಯರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಆಡಳಿತ ಮಂಡಳಿಯ ಸದಸ್ಯೆಯರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.