ಬೆಂಗಳೂರು, ಅ. 23: ರಾಜ್ಯದಲ್ಲಿ ಪದವಿ ಕಾಲೇಜುಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಸರ್ಕಾರ ತೀರ್ಮಾನ ಕೈಗೊಂಡಿದೆ. ನವೆಂಬರ್ 17ರಿಂದ ಯುಜಿಸಿ ಮಾರ್ಗಸೂಚಿಯ ಅನುಸಾರ ಕಾಲೇಜು ಪ್ರಾರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ತಿಳಿಸಿದ್ದಾರೆ.ನವೆಂಬರ್ 17 ರಿಂದ ಪದವಿ, ಡಿಪೆÇ್ಲೀಮಾ, ಇಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಕಾಲೇಜು ಪ್ರಾರಂಭಿಸಲಾಗುತ್ತದೆ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿಯೂ ಕಲಿಯಬಹುದು ಇಲ್ಲವೇ ಆನ್ ಲೈನ್ ತರಗತಿಗೂ ಹಾಜರಾಗಬಹುದು. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತರಗತಿಗಳಲ್ಲಿ ಕೋವಿಡ್ ಸಂಬಂಧ ಎಲ್ಲಾ ಮುಂಜಾಗ್ರತಾ ಕ್ರಮಗಳು ಕೈಗೊಳ್ಳಲಾಗುತ್ತದೆ. ಇಂದು ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿಯವರ ಅಧ್ಯಕ್ಷತೆಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು ನವೆಂಬರ್ 17 ರಿಂದ ಪದವಿ ಕಾಲೇಜು ಪುನಃ ತೆರೆಯಲು ನಿರ್ಧರಿಸಲಾಗಿರುವುದಾಗಿ ಅವರು ತಿಳಿಸಿದ್ದಾರೆ.ಅನುಮತಿ ಪತ್ರ ಕಡ್ಡಾಯ ತರಗತಿಗಳಲ್ಲಿ ಶಿಕ್ಷಣ ಪ್ರಾರಂಭವಾದರು ಆನ್‍ಲೈನ್ ಮೂಲಕವೂ ವಿದ್ಯಾರ್ಥಿಗಳು ನೋಂದಾಯಿಸಿಕೊಂಡು ಮನೆಯಲ್ಲಿಯೇ ವಿದ್ಯಾಭ್ಯಾಸಕ್ಕೆ ಅವಕಾಶವಿದೆ. ಖುದ್ದಾಗಿ ತರಗತಿಗೆ ಬರಲು ಇಚ್ಚಿಸುವವರು

ಪೋಷಕರಿಂದ ಅನುಮತಿ ಪತ್ರ ಪಡೆದು ನಂತರ ತರಗತಿಗೆ ಆಗಮಿಸಲು ಅವಕಾಶವಿದೆ.

(ಮೊದಲ ಪುಟದಿಂದ)

ಟಾಸ್ಕ್ ಫೋರ್ಸ್ ರಚನೆ

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಕೋವಿಡ್ ಸಂಬಂಧ ಮಾರ್ಗಸೂಚಿಗಳನ್ನು ಪಾಲಿಸಲು ಟಾಸ್ಕ್ ಫೋರ್ಸ್ ಅನ್ನು ರಚನೆ ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ ಹಾಗೂ ಪ್ರತಿ ಕಾಲೇಜಿನಲ್ಲಿ ಯಾವುದೇ ತೊಂದರೆಗಳಾಗದಂತೆ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗುವುದಾಗಿ ಅಶ್ವತ್ ನಾರಾಯಣ್ ಅವರು ಮಾಹಿತಿ ನೀಡಿದ್ದಾರೆ.

ಸಂಖ್ಯೆ ಅನುಗುಣವಾಗಿ ಮುಂದಿನ ಕ್ರಮ

ತಾ.17 ರಿಂದ ಕಾಲೇಜುಗಳು ಪ್ರಾರಂಭವಾಗಲಿದ್ದು, ತರಗತಿಗಳಿಗೆ ಆಗಮಿಸುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಅವಲಂಬಿಸಿ ಮುಂದಿನ ದಿನಗಳಲ್ಲಿ ತರಗತಿಗಳನ್ನು ಹೇಗೆ ನಡೆಸಬೇಕು, ಎಷ್ಟು ಬ್ಯಾಚ್‍ಗಳಲ್ಲಿ ತರಗತಿಗಳನ್ನು ನಡೆಸಬೇಕು, ಎಷ್ಟು ಮಂದಿ ವಿದ್ಯಾರ್ಥಿಗಳು ಒಂದು ಬ್ಯಾಚ್‍ನಲ್ಲಿ ಪಾಲ್ಗೊಳ್ಳಬೇಕು ಎಂಬುದನೆಲ್ಲ ನಿರ್ಧರಿಸಲಾಗುವುದು ಎಂದು ಅಶ್ವತ್‍ನಾರಾಯಣ್ ತಿಳಿಸಿದ್ದಾರೆ. ಹಾಸ್ಟೆಲ್‍ಗಳಲ್ಲಿ ಸಹ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧ್ಯಕ್ಷತೆಯ ಸಭೆಯಲ್ಲಿ ಪದವಿ ಕಾಲೇಜು ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಚರ್ಚಿಸಲಾಗಿದ್ದು ಸಭೆಯಲ್ಲಿ ಸಿ.ಎನ್. ಅಶ್ವತ್ ನಾರಾಯಣ್ ಅವರೊಂದಿಗೆ ಆರೋಗ್ಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಹಣಕಾಸು, ಸಾರಿಗೆ ಮತ್ತು ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.