ಮಡಿಕೇರಿ, ಅ. 24: ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಕೋವಿಡ್-19 ಸೇವಾ ಕೇಂದ್ರ ಆರಂಭಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೆವಾ ಪ್ರಾಧಿಕಾರದ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ ಅವರು ಉದ್ಘಾಟಿಸಿದರು. (ಮೊದಲ ಪುಟದಿಂದ) 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪಿ.ಎಸ್ ಚಂದ್ರಶೇಖರ್, ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಬಿ.ಕೆ ಮನು, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಸ್ಮಿತಾ ನಾಗಲಾಪುರ, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್ ಕವನ್, ಆಡಳಿತ ಸಹಾಯಕ ಬಿ.ಎಸ್ ಜಯಪ್ಪ ಇತರರು ಇದ್ದರು.