ಮಡಿಕೇರಿ, ಅ. 24: ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು ಮೃತರ ಸಂಖ್ಯೆ 66 ಕ್ಕೇರಿದೆ. ಕುಂಜಿಲಗೇರಿಯ 87 ವರ್ಷದ ಪುರುಷಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ತಾ. 24 ರಂದು ಹೊಸದಾಗಿ 37 ಕೊರೊನಾ ಪ್ರಕರಣ ಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 66,447 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 4,692 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 4,335 ಮಂದಿ ಗುಣಮುಖ ರಾಗಿದ್ದಾರೆ.

ಒಟ್ಟು 66 ಮಂದಿ ಸಾವನ್ನಪ್ಪಿದ್ದು 291 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 72 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 28 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 191 ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 280 ನಿಯಂತ್ರಿತ ವಲಯಗಳಿವೆ.