ಮಡಿಕೇರಿ, ಅ. 24: ಮಾರ್ಚ್‍ನಿಂದ ಅಕ್ಟೋಬರ್ 23ರ ವರೆಗೆ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ (ಕೋವಿಡ್ 19 ಪಾಸಿಟಿವ್ ಬಂದಿದ್ದ) 50 ಮಂದಿ ಗರ್ಭಿಣಿಯರಿಗೆ ಯಶಸ್ವಿಯಾಗಿ ಸಾಮಾನ್ಯ ಹಾಗೂ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಾರ್ಯಪ್ಪ ಅವರು ತಿಳಿಸಿದ್ದಾರೆ. ಪಾಸಿಟಿವ್ ಬಂದಿದ್ದ ಗರ್ಭಿಣಿಯರೆಲ್ಲರೂ ಗುಣಮುಖರಾಗಿ ಶಿಶು ಮತ್ತು ತಾಯಿ ಆರೋಗ್ಯದಿಂದ ಇದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.