ಗೋಣಿಕೊಪ್ಪಲು, ಆ. 27: ವಾಣಿಜ್ಯ ನಗರ ಗೋಣಿಕೊಪ್ಪಲುವಿನ ಪೆÇಲೀಸ್ ಠಾಣೆಗೆ ನೂತನ ಠಾಣಾಧಿಕಾರಿ ನೇಮಕಗೊಂಡಿದ್ದಾರೆ. ಈ ಹಿಂದೆ ಕರ್ತವ್ಯದಲ್ಲಿದ್ದ ಸುರೇಶ್ ಬೋಪಣ್ಣ ಚಾಮರಾಜನಗರ ಪೆÇಲೀಸ್ ಠಾಣೆಗೆ ವರ್ಗ ಗೊಂಡ ಹಿನ್ನೆಲೆಯಲ್ಲಿ ತೆರವಾದ ಇವರ ಸ್ಥಾನಕ್ಕೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಪೆÇಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹೆಚ್. ಸುಬ್ಬಯ್ಯ ನೇಮಕಗೊಂಡಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದ ಸುಬ್ಬಯ್ಯ ಈ ಹಿಂದೆ ಮಡಿಕೇರಿಯ ಡಿಎಸ್‍ಬಿ ವಿಭಾಗದಲ್ಲಿ ಕೆಲಸ ನಿರ್ವಹಿಸಿದ್ದರು. ‘ಶಕ್ತಿ’ಯೊಂದಿಗೆ ಮಾತನಾಡಿದ ನೂತನ ಎಸ್.ಐ. ಸುಬ್ಬಯ್ಯ ಕಾನೂನು ಸುವ್ಯವಸ್ಥೆ ಮೊದಲ ಆದ್ಯತೆಯಾಗಿದ್ದು ಅಪರಾಧ ತಡೆಗಟ್ಟುವುದು, ಪತ್ತೆ ಹಚ್ಚುವುದು ಆದ್ಯ ಕರ್ತವ್ಯ; ನಗರದ ಸುಗಮ ಸಂಚಾರ ವ್ಯವಸ್ಥೆಗೆ ಸಾರ್ವಜನಿಕರೊಂದಿಗೆ ಜನಸ್ನೇಹಿ ಪೆÇಲೀಸರಾಗಿ ಕೆಲಸ ನಿರ್ವಹಿಸುವ ಭರವಸೆ ನೀಡಿದರು.