ವೀರಾಜಪೇಟೆ, ಅ. 27: ವೀರಾಜಪೇಟೆ ಬಳಿಯ ಕಾಕೋಟುಪರಂಬಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ 20 ಮಂದಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಕಾಕೋಟುಪರಂಬು ಕಾಂಗ್ರೆಸ್ ಪಕ್ಷದ ವಲಯ ಅಧ್ಯಕ್ಷ ಮಂಡೇಟಿರ ಅನಿಲ್ ಅಯ್ಯಪ್ಪ ಹಾಗೂ ವೀರಾಜಪೇಟೆ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಪೊನ್ನಕ್ಕಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ವಲಯ ಹಾಗೂ ಬೂತ್ ಮಟ್ಟದ ಸಭೆಯಲ್ಲಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹಾಗೂ ಪಕ್ಷದ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಇವರುಗಳು 20 ಮಂದಿಗೆ ಕಾಂಗ್ರೆಸ್ ಧ್ವಜ ನೀಡಿ ಪಕ್ಷ ಸೇರ್ಪಡೆಗೊಳಿಸಿದರು.
ಈ ಸಂದರ್ಭ ಪಕ್ಷದ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಮಹಮ್ಮದ್ ರಾಫಿ, ಹಿಂದುಳಿದ ವರ್ಗದ ವಿ.ಕೆ. ಸತೀಶ್, ಮಹಿಳಾ ಘಟಕದ ದಿವ್ಯಾ ಮತ್ತಿತರರು ಹಾಜರಿದ್ದರು.