ಗೋಣಿಕೊಪ್ಪಲು, ಅ. 27: ಅಮ್ಮತ್ತಿಯ ಜೂಮರ್ಸ್ ಯುವಕ ಸಂಘ ಹಾಗೂ ಆರ್.ಐ.ಹೆಚ್.ಪಿ. ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ತಾ. 31ರಂದು ಆಸ್ಪತ್ರೆಯ ಆವರಣದಲ್ಲಿ ರಕ್ತದಾನ ಶಿಬಿರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ ಆಗಿ ದುಡಿದ ಆರೋಗ್ಯ ಸಹಾಯಕಿಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.