ಮಡಿಕೇರಿ, ಅ. 26: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಆಸ್ಪತ್ರೆ ಕಟ್ಟಡ ಮತ್ತು ತಡೆಗೋಡೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ವೀಕ್ಷಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ, ಅಧೀಕ್ಷಕ ಡಾ. ಲೋಕೇಶ್ ಇತರರು ಇದ್ದರು.