ಮಡಿಕೇರಿ, ಅ. 26: ಕಡಗದಾಳು ಇಬ್ನಿವಳವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. 30 ರಂದು ಬೆಳಿಗ್ಗೆ 9.30 ಗಂಟೆಗೆ ನೆರವೇರಲಿದೆ.

ಸಮುದಾಯ ಭವನದ ಉದ್ಘಾಟನೆಯನ್ನು ಸಂಸದ ಪ್ರತಾಪ್ ಸಿಂಹ, ಕಚೇರಿ ಉದ್ಘಾಟನೆಯನ್ನು ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ನಗದು ಕೌಂಟರನ್ನು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಭದ್ರತಾ ಕೊಠಡಿಯನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ. ಗಣಪತಿ, ಗೋದಾಮು ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ವ್ಯಾಪಾರ ಮಳಿಗೆಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ನೆರವೇರಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಕಡಗದಾಳು ಇಬ್ನಿವಳವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆಚ್ಚೇಟಿರ ಬಿ. ಬಿದ್ದಯ್ಯ ಹಾಗೂ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಹಕಾರ ಮಹಾಮಂಡಲ ನಿರ್ದೇಶಕ ಎ.ಕೆ. ಮನು ಮುತ್ತಪ್ಪ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ (ನಿ) ಮುಂಡಂಡ ಸಿ. ನಾಣಯ್ಯ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಪಿ.ವಿ. ಶ್ರೀನಿವಾಸ್, ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ. ಸಲೀಂ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ (ಪ್ರಬಾರ) ಎಂ.ಈ. ಮೋಹನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.