ವೀರಾಜಪೇಟೆ, ಅ. 26: ವೀರಾಜಪೇಟೆಯ ಮಲೆತಿರಿಕೆಬೆಟ್ಟದ ನಿವಾಸಿ ಮಂಜುನಾಥ್ (36) ಎಂಬಾತನು ನಿನ್ನೆ ದಿನ ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಆತನ ಪತ್ನಿ ನೀಡಿದ ದೂರಿನ ಮೇರೆಗೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೀವನದಲ್ಲಿ ಜಿಗುಪ್ಸೆಯೇ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ. ಮೃತದೇಹವನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಿದ ನಂತರ ಪೊಲೀಸರು ಮೃತ ದೇಹವನ್ನು ವಾರೀಸುದಾರರಿಗೆ ಒಪ್ಪಿಸಿದರು.