ಕೂಡಿಗೆ, ಅ. 27: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿ ನವರಾತ್ರಿಯ ಪೂಜೆ ಅಂಗವಾಗಿ ಚಂಡಿಕಾಹೋಮ ಪೂಜಾ ಕಾರ್ಯಕ್ರಮ ನಡೆಯಿತು. ಹೋಮ, ಹವನಗಳು ನೆರವೇರಿದವು. ಗ್ರಾಮದ ಮಹಿಳೆಯರು ದೇವಿಯ ಸನ್ನಿಧಿಯಲ್ಲಿ ಶ್ರೀ ಲಲಿತಾ ಸಹಸ್ರನಾಮ ಪಾರಾಯಣದೊಂದಿಗೆ ಕುಂಕುಮಾರ್ಚನೆ ಪೂಜೆ ನೆರವೇರಿಸಿದರು.

ಭಕ್ತಾದಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ, ಕಾರ್ಯದರ್ಶಿ ಸುರೇಶ್ ಸೇರಿದಂತೆ ಸಮಿತಿಯ ಸರ್ವ ಸದಸ್ಯರು ಮತ್ತು ಭಕ್ತಾದಿಗಳು ಭಾಗವಹಿಸಿದ್ದರು.