ಮಡಿಕೇರಿ, ಅ. 26: ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು ಮೃತರ ಸಂಖ್ಯೆ 67 ಕ್ಕೇರಿದೆ. ಕಟ್ಟೆಮಾಡುವಿನ 66 ವರ್ಷದ ಪುರುಷ ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ತಾ.26 ರಂದು ಹೊಸದಾಗಿ 40 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 66,899 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 4,773 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 4,476 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 67 ಮಂದಿ ಸಾವನ್ನಪ್ಪಿದ್ದು 230 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 58 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 30 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 142 ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 254 ನಿಯಂತ್ರಿತ ವಲಯಗಳಿವೆ.