ಸುಂಟಿಕೊಪ್ಪ, ಅ.28: ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಕನ್ನಡ ವೃತ್ತದಲ್ಲಿ ಕಳೆದ ಹಲವು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದ್ದ ಕನ್ನಡ ರಾಜ್ಯೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು.
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ಅಧ್ಯಕ್ಷ ಸುನಿಲ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು.
ತಾ. 1 ರಂದು ಬೆಳಿಗ್ಗೆ 9.30ಕ್ಕೆ ಕನ್ನಡ ವೃತ್ತದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಸುನಿಲ್ ವಹಿಸಲಿದ್ದು, ದ್ವಜಾರೋಹಣವನ್ನು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಕೆ.ಟಿ.ದರ್ಶನ್ ನೆರವೇರಿಸಿ ದಿನದ ಮಹತ್ವದ ಕುರಿತು ಮಾತನಾಡಲಿದ್ದಾರೆ. ಇದೇ ವೇಳೆ ಸನ್ಮಾನ ಕಾರ್ಯಕ್ರಮವನ್ನು ನಡೆಯಲಿದೆ.
ರಾಜ್ಯೋತ್ಸವ ಕಾರ್ಯಕ್ರಮ ಕಸಾಪದ ವತಿಯಿಂದಲೇ ಎಲ್ಲ ಕನ್ನಡಪರ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ನಡೆಸಲು ತೀರ್ಮಾನಿಸಲಾಯಿತು. ಅಲ್ಲದೇ ಕಾರ್ಯಕ್ರಮವನ್ನು ಅತೀ ಸರಳ ಮತ್ತು ಅಂತರ ಕಾಯ್ದುಕೊಂಡು ನಡೆಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಗ್ರಾ.ಪಂ. ಪಿಡಿಒ ವೇಣುಗೋಪಾಲ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಡಿ.ನರಸಿಂಹ, ಚುಟುಕು ಸಾಹಿತಿ, ಕಸಾಪ ನಿಕಟಪೂರ್ವ ಅಧ್ಯಕ್ಷ ವಹೀದ್ ಜಾನ್, ಕಸಾಪ ತಾಲೂಕು ಸದಸ್ಯ ಪಿ.ಎಫ್.ಸಭಾಸ್ಟಿನ್, ಕಸಾಪ ಕಾರ್ಯದರ್ಶಿ ಸತೀಶ್ ಶೇಟ್, ಸದಸ್ಯ ಎಂ.ಬಿ.ವಿನ್ಸೆಂಟ್, ಬಿ.ಎಸ್.ಸತೀಶ್ ಸೇಟ್, ಕರವೇ ಅಧ್ಯಕ್ಷ ನಾಗೇಶ್ ಪೂಜಾರಿ, ಗ್ರಾ.ಪಂ.ಮಾಜಿ ಸದಸ್ಯ ಕೆ.ಇ.ಕರೀಂ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರಾದ ರಾಜು ರೈ, ರಫೀ ಖಾನ್ ಇತರರು ಇದ್ದರು.