ಮಡಿಕೇರಿ, ಅ.28 : ಮಡಿಕೇರಿ ನಗರಸಭೆಯ ಮಾಜಿ ಸದಸ್ಯ ಬಿ.ಎ.ರಾಮಯ್ಯ (79) ಅವರು ನಿಧನ ರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ 2.30ಕ್ಕೆ ಮಡಿಕೇರಿಯ ತಮ್ಮ ನಿವಾಸದಲ್ಲಿ ಮೃತಪಟ್ಟರು. ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮಡಿಕೇರಿ ದಸರಾ ಸಮಿತಿಯಲ್ಲಿ ಹಲವು ಕಾಲ ಪ್ರಧಾನ ಕಾರ್ಯದರ್ಶಿಯಾಗಿ, ಸರ್ವೋದಯ ಸಮಿತಿಯ ಕೋಶಾಧಿಕಾರಿಯಾಗಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿ, ಪ್ರಧಾನ ಕಾರ್ಯ ದರ್ಶಿಯಾಗಿ, ಟೌನ್ ಬ್ಯಾಂಕ್ ಉಪಾಧ್ಯಕ್ಷ ರಾಗಿ, ದೇಚೂರು ಶ್ರೀ ರಾಮ ವಿದ್ಯಾಗಣಪತಿ ದೇವಾಲಯ ಸಮಿತಿ ಅಧ್ಯಕ್ಷರಾಗಿ ಹಲವು ಸಂಘ ಸಂಸ್ಥೆಗಳಲ್ಲಿ ಶ್ರೀಯುತರು ಸೇವೆ ಸಲ್ಲಿಸಿದ್ದರು. ಅಂತ್ಯಕ್ರಿಯೆ ತಾ. 29 (ಇಂದು) ಮಧ್ಯಾಹ್ನ ಗೌಡ ಸಮಾಜದ ರುದ್ರಭೂಮಿಯಲ್ಲಿ ನೆರವೇರಲಿದೆ.

ಸಂತಾಪ ಸರ್ವೋದಯ ಸಮಿತಿಯ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ ಹಾಗೂ ಪದಾಧಿಕಾರಿಗಳು ರಾಮಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.