ಮಡಿಕೇರಿ, ಅ.28: ಪ್ರವಾಸೋದ್ಯಮ ಇಲಾಖೆಯ ಜಂಟಿ ಆಯುಕ್ತರಾದ ಜಿ.ಎನ್.ಶ್ವೇತಾ ಅವರು ಬುಧವಾರ ಕೊಡಗು ಜಿಲ್ಲೆಗೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದರು. ಜನರಲ್ ತಿಮ್ಮಯ್ಯ ಮ್ಯೂಸಿಯಂ, ಕೂರ್ಗ್ ವಿಲೇಜ್, ಓಂಕಾರೇಶ್ವರ ದೇವಸ್ಥಾನದ ಬಳಿಯ ಕಾಮಗಾರಿ ಮತ್ತು ರಾಜಾಸೀಟು ಬಳಿ ಇಲಾಖೆಯ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‍ಗಳು ಇತರರು ಇದ್ದರು.