ಮಡಿಕೇರಿ, ಅ.29: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನವೆಂಬರ್ 1 ರಂದು ಭೇಟಿ ನೀಡಲಿದ್ದಾರೆ.
ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 11 ಗಂಟೆಗೆ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ 11.30 ಗಂಟೆಗೆ ತಲಕಾವೇರಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ತಿಳಿಸಿದ್ದಾರೆ.