ಕುಶಾಲನಗರ, ಅ. 29: ಕುಶಾಲನಗರ ಪಟ್ಟಣ ಪಂಚಾಯ್ತಿಯ ಪೌರಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಪಂಚಾಯ್ತಿ ಆರೋಗ್ಯ ಅಧಿಕಾರಿ ಉದಯಕುಮಾರ್ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಸ್.ಆರ್.ಗಣೇಶ್, ಕಾರ್ಯದರ್ಶಿಯಾಗಿ ಶ್ರೀದೇವಿ, ಖಜಾಂಚಿಯಾಗಿ ನಂಜುಂಡ ಸೋದವಾಡ ಅವರು ಆಯ್ಕೆಯಾಗಿದ್ದಾರೆ. ಪಪಂ ಮುಖ್ಯಾಧಿಕಾರಿ ಸುಜಯ್‍ಕುಮಾರ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆಯ ವಿಜಯೇಂದ್ರ ಮತ್ತು ಪಂಚಾಯ್ತಿ ಸಿಬ್ಬಂದಿಗಳು ಇದ್ದರು.