*ಗೋಣಿಕೊಪ್ಪಲು, ಅ. 29 : ಭಾರತ ಪ್ರಜಾಸೇನಾ ಸಮಿತಿಯ ಕೊಡಗು ಜಿಲ್ಲಾಧ್ಯಕ್ಷರಾಗಿ ವಕೀಲರಾದ ಪ್ರದೀಪ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಾದ ಕೆ.ಎಂ. ಮಹಾದೇವಯ್ಯ ಅವರ ಅಧ್ಯಕ್ಷತೆಯಲ್ಲಿ ಗೋಣಿಕೊಪ್ಪಲುವಿನಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಉದಯ, ಪ್ರಧಾನ ಕಾರ್ಯದರ್ಶಿಗಳಾಗಿ ರಮೇಶ್, ಖಜಾಂಚಿಯಾಗಿ ಗೀತಾ ಆಯ್ಕೆ ಆಗಿದ್ದಾರೆ.