ಮಡಿಕೇರಿ, ಅ. 29: 2020-21 ನೇ ಸಾಲಿನಲ್ಲಿ ಅಲೆಮಾರಿ/ ಅರೆಅಲೆಮಾರಿ ಜನಾಂಗಕ್ಕೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಭೂಖರೀಧಿ ಯೋಜನೆ ಮತ್ತು ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಜನಾಂಗದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಗಳಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋವನ್ನು ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಲಾತಿಗಳು, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರುವ ಜಮೀನಿನ ದಾಖಲಾತಿಗಳು, ಸಣ್ಣ ಮತ್ತು ಅತಿ ಸಣ್ಣ ರೈತರ ಪ್ರಮಾಣ ಪತ್ರಗಳನ್ನು ಮತ್ತು ಭೂಖರೀದಿಗೆ ಸಂಬಂಧಿಸಿದಂತೆ ಜಮೀನುದಾರರ ಕಂದಾಯ ದಾಖಲೆಗಳು ನಿಗಮದ ವೆಬ್‍ಸೈಟ್ WWW.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್ ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ನವೆಂಬರ್ 2 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ : 08272-221656 ದೂರವಾಣಿ ಮುಖಾಂತರ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ಮಡಿಕೇರಿ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ಆನ್‍ಲೈನ್ ಮೂಲಕ ಅಗತ್ಯ ದಾಖಾಲಾತಿಗಳೊಂದಿಗೆ ತಿತಿತಿ.ಞಚಿಛಿಜಛಿ. ಞಚಿಡಿಟಿಚಿಣಚಿಞಚಿ. gov.iಟಿ ಇಲ್ಲಿಗೆ ನವೆಂಬರ್, 15 ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಅರ್ಜಿಯನ್ನು ಆನ್‍ಲೈನ್ ಮುಖಾಂತರ ಮಾತ್ರ ಸ್ವೀಕರಿಸಲಾಗುವುದು.

ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯ ಅರ್ಹತೆಗಳು: ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ನಮೂನೆ-ಜಿಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು.

ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ: +91 9448451111, ಇ-ಮೇಲ್: suಠಿಠಿoಡಿಣ.ಞಚಿಛಿಜಛಿ@ಞಚಿಡಿಟಿಚಿಣಚಿಞಚಿ.gov.iಟಿ ಯೋಜನೆಗಳ ಮಾರ್ಗಸೂಚಿಗಳು ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು ತಿತಿತಿ.ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ತಿಳಿಯಬಹುದಾಗಿದೆ.

ಸ್ನಾತಕೋತ್ತರ ಪ್ರವೇಶಾತಿ: ಮಡಿಕೇರಿ : ಪ್ರಸಕ್ತ ಸಾಲಿಗೆ ಸ್ನಾತಕೋತ್ತರ ತರಗತಿಗಳಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಸರ್ಕಾರದ ಪ್ರವೇಶಾತಿ ಮಾರ್ಗಸೂಚಿ ಅನ್ವಯ ಪ್ರವೇಶಾತಿ ನಡೆಸಲಾಗುವುದು. ಎಂ.ಕಾಂ., ಎಂಬಿಎ (ಟ್ರಾವೆಲ್ ಮತ್ತು ಟೂರಿಸಂ), ಎಂ.ಎ(ಇಂಗ್ಲೀಷ್), ಎಂ.ಎ(ಅರ್ಥಶಾಸ್ತ್ರ), ಎಂ.ಎಸ್ಸಿ (ಭೌತಶಾಸ್ತ್ರ) ಹಾಗೂ ಸ್ನಾತಕೋತ್ತರ ಯೋಗ ವಿಜ್ಞಾನ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಆಯಾಯ ವಿಭಾಗಗಳಿಂದ ಪಡೆದುಕೊಂಡು ನವೆಂಬರ್, 16 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಾಲೇಜಿನ ದೂ.ಸಂ.08272-223533/ 8088272689 ಹಾಗೂ ವಿಶ್ವ ವಿದ್ಯಾನಿಲಯದ ಜಾಲತಾಣ (ವೆಬ್‍ಸೈಟ್) ತಿತಿತಿ.mಚಿಟಿgಚಿಟoಡಿeuಟಿiveಡಿsiಣಥಿ.ಚಿಛಿ.iಟಿ ನ್ನು ಸಂಪರ್ಕಿಸಬಹುದು.