ವೀರಾಜಪೇಟೆ ವರದಿ, ಅ. 29: ಹಲವು ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದ ವೃದ್ಧರೋರ್ವರು ನೇಣಿಗೆ ಶರಣಾದ ಘಟನೆ ವೀರಾಜಪೇಟೆ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ.

ಮಗ್ಗುಲ ಗ್ರಾಮದ ನಿವಾಸಿ ದಿ. ಚೋಕಂಡ ಪೂವಯ್ಯ ಅವರ ಪುತ್ರ ಚೋಕಂಡ ವಿಜು ಕಾವೇರಪ್ಪ (62) ನೇಣಿಗೆ ಶರಣಾದ ವ್ಯಕ್ತಿ. ಮೃತರ ಪತ್ನಿ ಮತ್ತು ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ನೆಲೆಸಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಮುಂಭಾಗದ ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಅಣ್ಣ ಭೀಮಯ್ಯ ಅವರು ನೀಡಿರುವ ದೂರಿನ ಮೇರೆಗೆ ವೀರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.