ಸುಂಟಿಕೊಪ್ಪ, ಅ.30: ಸುಂಟಿಕೊಪ್ಪ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವಲಯಾಧ್ಯಕ್ಷರಾಗಿ ಆಲಿಕುಟ್ಟಿ, ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಎಚ್. ರಫೀಕ್ ಅವರನ್ನು ನೇಮಕಗೊಳಿಸಲಾಯಿತು.

ಕಾಂಗ್ರೆಸ್ ಕಚೇರಿಯಲ್ಲಿ ಕೊಡಗು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಮಹಿಳಾ ಅಲ್ಪಸಂಖ್ಯಾತರ ಘಟಕಕ್ಕೆ ರೋಸ್‍ಮೇರಿ ರಾಡ್ರಿಗಸ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಅಂಬಚ್ಚು, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸಂಯೋಜಕ ರಾಗಿ ನಯಾಜ್ (ಭೀಮ) ಅವರು ಗಳನ್ನು ನೇಮಕಗೊಳಿಸಲಾಯಿತು.

ಈ ಸಂದರ್ಭ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಕೆ.ಪೆಮ್ಮಯ್ಯ, ಕಾಂಗ್ರೆಸ್ ಮಾಜಿ ಅಧ್ಯಕ್ಷ ದೇವ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ, ಪಿ.ಎಫ್. ಸಬಾಸ್ಟೀನ್, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪಿ.ಆರ್. ಸುಕುಮಾರ್ ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಅಕಿಮ್ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.