ಮಡಿಕೇರಿ, ಅ. 30: ಮಡಿಕೇರಿ ನಗರ ಠಾಣೆಯ ವತಿಯಿಂದ ಇಂದು ಠಾಣಾ ವ್ಯಾಪ್ತಿಯಲ್ಲಿ ಕೋವಿಡ್ ತಡೆಗಟ್ಟುವ ಸಂಬಂಧ ಮಾಸ್ಕ್ ಧರಿಸುವ ಬಗ್ಗೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಗರ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.