ಕೂಡಿಗೆ, ಅ. 30: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ಸಭೆ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಹಿಸಿದ್ದರು.

ಮುಂದಿನ ದಿನಗಳಲ್ಲಿ ನಡೆಯುವ ಉದ್ಯೋಗ ಖಾತರಿ ಯೋಜನೆ ವಿಶೇಷ ಗ್ರಾಮ ಸಭೆಯಲ್ಲಿ ಕಾಮಗಾರಿಗಳ ಪಟ್ಟಿಯನ್ನು ಮಂಡನೆ ಮಾಡಿ ಕ್ರಿಯಾ ಯೋಜನೆಗೆ ಅನುಮೋದನೆ ಪಡೆದು ಕಾಮಗಾರಿ ಗಳನ್ನು ನಡೆಸಲಾಗುವುದು ಎಂದರು.