ಮಡಿಕೇರಿ, ಅ. 30: ಜಿಲ್ಲೆಯಲ್ಲಿ ತಾ.29 ರಂದು ಹೊಸದಾಗಿ 25 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 69,324 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 4,866 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 4,616 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 68 ಮಂದಿ ಸಾವನ್ನಪ್ಪಿದ್ದು 182 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 41 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 23 ಮಂದಿ ಕೋವಿಡ್ ಕೇರ್ ಸೆಂಟರ್ ನಲ್ಲಿ, 118 ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 187 ನಿಯಂತ್ರಿತ ವಲಯಗಳಿವೆ.