ಸೋಮವಾರಪೇಟೆ,ಅ.31: ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ವತಿಯಿಂದ ನ.1 ರಂದು (ಇಂದು) ಸ್ಥಳೀಯ ಸಾಕ್ಷಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ಕರವೇ ಅಧ್ಯಕ್ಷ ಕೆ.ಎನ್. ದೀಪಕ್ ತಿಳಿಸಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಸಾಪ ಅಧ್ಯಕ್ಷ ಜವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಮಹೇಶ್, ಉದ್ಯಮಿ ಹರಪಳ್ಳಿ ರವೀಂದ್ರ, ವೃತ್ತ ನಿರೀಕ್ಷಕ ಮಹೇಶ್, ಹಿರಿಯ ಸಾಹಿತಿ ಜಲಾ ಕಾಳಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ಶಿವಶಂಕರ್, ಕಾಫಿ ಬೆಳೆಗಾರ ಎ.ಪಿ. ಶಂಕರಪ್ಪ, ಕುಶಾಲನಗರದ ಪತ್ರಕರ್ತ ಟಿ.ಆರ್. ಪ್ರಭುದೇವ್, ಛಾಯಾಚಿತ್ರಗಾರ ಪೀಟರ್, ರಂಗಭೂಮಿ ಕಲಾವಿದ ಪರಮೇಶ್, ಕೂರ್ಗ್ ಸ್ಟಾರ್ ಮೆಲೋಡೀಸ್ ಸಂಸ್ಥಾಪಕ ಆನಂದ್ ಅವರುಗಳನ್ನು ಸನ್ಮಾನಿಸಲಾಗುವದು.
ರಾಜ್ಯೋತ್ಸವ ಸಂಭ್ರಮ ಅಂಗವಾಗಿ ಕೂರ್ಗ್ ಸ್ಟಾರ್ ಮೆಲೋಡೀಸ್ ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದು ದೀಪಕ್ ತಿಳಿಸಿದ್ದಾರೆ.