ಮಡಿಕೇರಿ, ಅ. 31: ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ 36 ನೇ ಸಂಸ್ಮರಣೆ ಮತ್ತು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 145ನೇ ಜನ್ಮದಿನಾಚರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಆಚರಿಸಲಾಯಿತು. ಇಂದಿರಾ ಗಾಂಧಿ ಮತ್ತು ವಲ್ಲಭಭಾಯಿ ಪಟೇಲರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ,ಕೆಪಿಸಿಸಿ ಸದಸ್ಯ ಟಿ.ಪಿ. ರಮೇಶ್ ಮಾತನಾಡಿ ಧೀಮಂತ ನಾಯಕಿ ಇಂದಿರಾ ಗಾಂಧಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು .ಇದೇ ಸಂದÀರ್ಭದಲ್ಲಿ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಇಂದಿರಾ ಗಾಂಧಿಯವರ ಪುತ್ತಳಿ ಸ್ಥಾಪನೆಗೆ ಸರ್ಕಾರವನ್ನು ಒತ್ತಾಯಿಸಲು ನಿರ್ಣಯ ಕೈಗೊಳ್ಳಲಾಯಿತು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ವಿ.ಪಿ. ಸುರೇಶ್, ಎಸ್.ಎಂ. ಚಂಗಪ್ಪ ,ಜಿಲ್ಲಾ ಕಾಂಗ್ರೆಸ್ ಖಜಾಂಚಿ ಹೆಚ್ ಎಂ ನಂದಕುಮಾರ್, ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ಯುವಕಾಂಗ್ರೆಸ್ ಅಧ್ಯಕ್ಷ ಹನೀಫ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಸ್ಮಾನ್, ವಕ್ತಾರ ಟಿ.ಇ. ಸುರೇಶ್, ನಗರ ಸಭೆ ಮಾಜಿ ಅಧ್ಯಕ್ಷೆ ಜುಲೇಕಾಬಿ, ಮಾಜಿ ಸದಸ್ಯರಾದ ಪ್ರಕಾಶ್ ಆಚಾರ್ಯ, ಚುಮ್ಮಿ ದೇವಯ್ಯ, ಉದಯ್ ಕುಮಾರ್, ಯತೀಶ್ ಕುಮಾರ್, ಯುವ ಕಾಂಗ್ರೆಸ್ ನಗರಾಧ್ಯಕ್ಷ ಸದಾ ಮುದ್ದಪ್ಪ, ಕಾನೆಹಿತ್ಲು ಮೊಣ್ಣಪ್ಪ, ಮುದ್ದುರಾಜ್, ಜಗದೀಶ್ ಪ್ರೇಮಾ ಕೃಷ್ಣಪ್ಪ, ಕೆ.ಇ. ಮಾಥ್ಯು ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ಸರಕಾರದ ವಿರುದ್ಧ ಪ್ರತಿಭಟನೆ

ನಂತರ ಇಂದಿರಾ ಗಾಂಧಿ ವೃತ್ತದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕೆ.ಕೆ. ಮಂಜುನಾಥ್ ಕುಮಾರ್; ರೈತರಿಗೆ ಅನ್ಯಾಯವಾಗುವುದನ್ನು ಕಾಂಗ್ರೆಸ್ ಸಹಿಸುವುದಿಲ್ಲ. ರೈತ ವಿರೋಧಿ ಕಾಯ್ದೆ ಹಿಂಪಡೆಯುವವರೆಗೂ ಹೋರಾಟ ನಡೆಯಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು .ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಮಾತನಾಡಿ; ಜನರು ನೆಮ್ಮದಿಯಿಂದ ಬದುಕು ಸಾಗಿಸಬೇಕಾದರೆ ಅದು ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಯಡಿಯೂರಪ್ಪ ಅಧಿಕಾರ ಕೊನೆಗೊಳ್ಳುವ ಸಂದೇಶವನ್ನು ಬಿಜೆಪಿ ನಾಯಕರೇ ಹಬ್ಬಿಸುತ್ತಿದ್ದು ಒಂದು ರೀತಿಯಲ್ಲಿ ಯಡಿಯೂರಪ್ಪ ನವರು ಶರಶಯ್ಯೆಯಲ್ಲಿ ಮಲಗಿದ ಭೀಷ್ಮನಂತೆ ಆಗಿದ್ದಾರೆ. ಇಂತಹ ಸರ್ಕಾರದಿಂದ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.