ಮಡಿಕೇರಿ, ಅ.31: ನಗರದ ಜಿಲ್ಲಾ ಪಂಚಾಯತ್ ಭವನದ ಸಮಗ್ರ ಗಿರಿಜನ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿ.ಇ.ಒ.ಭನ್ವರ್ ಸಿಂಗ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಯ ಅಧಿಕಾರಿ ಸಿ.ಶಿವಕುಮಾರ್ ಇತರರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಆರ್ಜಿ*ಗೋಣಿಕೊಪ್ಪಲು: ವಾಲ್ಮೀಕಿ ಋಷಿಯ ತತ್ವ, ಸಿದ್ದಾಂತಗಳು ಹಾಗೂ ಸಾಹಿತ್ಯವನ್ನು ಪಾರಂಪರಿಕವಾಗಿ ಜೀವನದಲ್ಲಿ ಅಳವಡಿಕೊಂಡಾಗ ಮನುಷ್ಯನ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ತಾಲೂಕು ತಹಶೀಲ್ದಾರ್ ನಂದೀಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಆರ್ಜಿ ಗ್ರಾ.ಪಂ. ವ್ಯಾಪ್ತಿಯ ವಾಲ್ಮೀಕಿ ಭವನದಲ್ಲಿ ನಡೆದ ವಾಲ್ಮೀಕಿಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಹಿಂದೂ ಧರ್ಮಕ್ಕೆ ವಾಲ್ಮೀಕಿ ಮಹರ್ಷಿಗಳು ರಾಮಾಯಣದ ಮೂಲಕ ಬಹುದೊಡ್ಡ ಕೊಡುಗೆ ಯನ್ನು ನೀಡಿದ್ದಾರೆ ಎಂದರು.

ತಾಲೂಕು ಪರಿಶಿಷ್ಟ ವರ್ಗದ ಕಲ್ಯಾಣ ಅಧಿಕಾರಿ ಗುರುಶಾಂತಪ್ಪ ರಾಮಾಯಣದಲ್ಲಿ ರಾಮನ ವ್ಯಕ್ತಿತ್ವವನ್ನು ಚಿತ್ರಿಸುವ ಮೂಲಕ ಆದರ್ಶ ಪುರುಷನ ಪರಿಚಯವನ್ನು ಹಿಂದೂ ಸಮಾಜಕ್ಕೆ ಮಾಡಿ ಕೊಟ್ಟಂತಹ ಮಹಾನ್ ಋಷಿ ವಾಲ್ಮೀಕಿಯಾಗಿದ್ದಾರೆ ಎಂದು ತಿಳಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ, ಪೆÇಲೀಸ್ ಉಪಾಧೀಕ್ಷಕ ಜಯಕುಮಾರ್, ಆರ್ಜಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಣಿ, ವಾಲ್ಮೀಕಿ ಸಂಘದ ಅಧ್ಯಕ್ಷ ಸುರೇಶ್ ಹಾಗೂ ನವೀನ್ ಕುಮಾರ್, ಕೀರ್ತಿಕುಮಾರ್, ಉಪಸ್ಥಿತರಿದ್ದರು.

(ಮೊದಲ ಪುಟದಿಂದ)

ಪೆÇನ್ನಂಪೇಟೆ : ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ್ ಆಚರಿಸ ಲಾಯಿತು. ಮುಖ್ಯೋಪಾಧ್ಯಾಯ ವಿಜಯ್ ಹಾಗೂ ಸಹ ಶಿಕ್ಷಕರು ಹಾಜರಿದ್ದರು.

ಕೂಡಿಗೆ : ಸರ್ಕಾರದ ಆದೇಶದ ಪ್ರಕಾರ ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕುಶಾಲನಗರದ ವಾಲ್ಮೀಕಿ ಭವನದಲ್ಲಿ

ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ತಾಲೂಕು ತಹಶೀಲ್ದಾರ್ ಗೋವಿಂದರಾಜ್ ಸಮ್ಮುಖದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ನಂತರ ದಿನದ ಮಹತ್ವದ ಬಗ್ಗೆ ತಹಶೀಲ್ದಾರ್ ಮಾತಾನಾಡಿದರು.

ಈ ಸಂದರ್ಭ ಜಿಲ್ಲಾ ಪಂಚಾಯತಿ ಸದಸ್ಯೆ ಮಂಜುಳಾ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಜಯಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶೇಖರ್, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಕಚೇರಿ ಅಧೀಕ್ಷಕ ಬಾಲಕೃಷ್ಣ ರೈ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗ ದವರು ವಾಲ್ಮೀಕಿ ಸಮಾಜದ ಮುಖಂಡರು ಇದ್ದರು.