ಸೋಮವಾರಪೇಟೆ, ಅ. 31: ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ ಉದ್ಘಾಟಿಸಿದರು. ನಂತರ ಮಾತನಾಡಿ, ಮಹರ್ಷಿ ವಾಲ್ಮೀಕಿಯವರು ಮಹಾಕಾವ್ಯ ನೀಡುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣದ ಪರಿಕಲ್ಪನೆಯನ್ನು ಹುಟ್ಟಹಾಕಿದ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಎನ್.ಎಂ. ನಾಗೇಶ್, ಎಸ್.ಎಸ್. ಶಾಂತ, ಕೆ.ಟಿ. ಚಂದ್ರಕಲಾ, ಸಿ.ಆರ್. ಶಿಲ್ಪ, ಸಿ.ಪಿ. ಮೀನಾಕ್ಷಿ, ಡಿ.ಇ. ಶಾರದ, ಸರಿತ ಸೇರಿದಂತೆ ಇತರರು ಪಾಲ್ಗೊಂಡಿದ್ದರು.