ಸೋಮವಾರಪೇಟೆ, ನ. 1: ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ದೇಶದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಮಾಜೀ ಪ್ರಧಾನಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಸಂಘದ ಪದಾಧಿಕಾರಿಗಳು ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಕೆ.ಎ. ಯಾಕೂಬ್, ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜ್, ಸಹ ಕಾರ್ಯದರ್ಶಿ ಅಜಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು.