ವೀರಾಜಪೇಟೆ, ನ. 1: ಕನ್ನಡಕ್ಕಾಗಿ ಕೈ ಎತ್ತು ಅದು ಕಲ್ಪವೃಕ್ಷವಾಗುತ್ತದೆ. ಕನ್ನಡಕ್ಕಾಗಿ ಕೊರಳೆತ್ತು ಅದು ಪಾಂಚ ಜನ್ಯವಾಗುತ್ತದೆ. ಅಂತಹ ಅಪಾರವಾದ ಶಕ್ತಿ ನಮ್ಮ ಕನ್ನಡ ಭಾಷೆಗಿದೆ ಎಂದು ವೀರಾಜಪೇಟೆ ತಹಶೀಲ್ದಾರ್ ಎಲ್.ಎಂ. ನಂದೀಶ್ ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವೀರಾಜಪೇಟೆ ತಾಲೂಕು ಆಡಳಿತ ಇವರ ಸಂಯುಕ್ತ ಆಶ್ರಯ ದಲ್ಲಿ 65ನೇ ಕನ್ನಡ ರಾಜ್ಯೋತ್ಸವದ ಸರಳ ಸಮಾರಂಭದಲ್ಲಿ ರಾಷ್ಟ್ರ ಹಾಗೂ ರಾಜ್ಯದ ಕನ್ನಡ ಧ್ವಜಾರೋಹಣ ನೆರವೇರಿಸಿದ ನಂತರ ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ಅವರು ಕನ್ನಡ ನೆÀಲ ಈ ಹಿಂದೆ ಮೈಸೂರು ರಾಜ್ಯ ಎಂದು ನಾಮಕರಣಗೊಂಡಿತ್ತು. ಅಲ್ಲಲ್ಲಿ ಚದುರಿಹೋಗಿದ್ದ ಕನ್ನಡ ನೆಲವನ್ನು ಒಗ್ಗೂಡಿಸಿ 1973ರ ನವೆಂಬರ್ 1 ರಂದು ಕರ್ನಾಟಕ ಎಂದು ಪುನರ್ ನಾಮಕರಣ ಮಾಡಲಾಯಿತು ಎಂದರು. ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮುಲ್ಲೆಂಗಡ ಮಧೋಷ್ ಪೂವಯ್ಯ ಮಾತನಾಡಿ ಕನ್ನಡ ಭಾಷೆಗೆ 2000ಕ್ಕೂ ಅಧಿಕ ವರ್ಷಗಳ ಇತಿಹಾಸ ಇದೆ. ಭಾಷೆ, ನೆಲ, ಜಲವನ್ನು ಉಳಿಸುವ ಕೆಲಸ ಪ್ರತಿಯೊಬ್ಬ ಕನ್ನಡಿಗನಿಂದ ಆಗಬೇಕು. ಹಿಂದಿ ರಾಷ್ಟ್ರೀಯ ಭಾಷೆಯಾಗಿದ್ದು ಅದರ ಮೇಲೆ ಎಲ್ಲರಿಗೂ ಗೌರವವಿದೆ. ಕನ್ನಡ ನಮ್ಮ ಮಾತೃಭಾಷೆ, ಹೃದಯ ಭಾಷೆಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ ಹೃದಯ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಬಲಾತ್ಕಾರದ
(ಮೊದಲ ಪುಟದಿಂದ) ಹಿಂದಿ ಹೇರಿಕೆಯನ್ನು ವಿರೋಧಿಸುವುದಾಗಿ ಹೇಳಿದರು.
ಸಭೆಯನ್ನುದ್ದೇಶಿಸಿ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಮುಲ್ಲೆಂಗಡ ಶಂಕರಿ ಪೊನ್ನಪ್ಪ ಮಾತನಾಡಿದರು.
ವೇದಿಕೆಯಲ್ಲಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಅಪ್ಪಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬೀಳಗಿ, ಡಿವೈಎಸ್ಪಿ ಜಯಕುಮಾರ್, ವೃತ್ತ ನಿರೀಕ್ಷಕ ಕ್ಯಾತೆಗೌಡ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದÀರ್ಭ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ (ಮೊದಲ ಪುಟದಿಂದ) ಹಿಂದಿ ಹೇರಿಕೆಯನ್ನು ವಿರೋಧಿಸುವುದಾಗಿ ಹೇಳಿದರು.
ಸಭೆಯನ್ನುದ್ದೇಶಿಸಿ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಮುಲ್ಲೆಂಗಡ ಶಂಕರಿ ಪೊನ್ನಪ್ಪ ಮಾತನಾಡಿದರು.
ವೇದಿಕೆಯಲ್ಲಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಅಪ್ಪಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬೀಳಗಿ, ಡಿವೈಎಸ್ಪಿ ಜಯಕುಮಾರ್, ವೃತ್ತ ನಿರೀಕ್ಷಕ ಕ್ಯಾತೆಗೌಡ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದÀರ್ಭ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಟಿ. ಶೆಟ್ಟಿಗೇರಿ ರೂಟ್ಸ್ ಶಾಲೆಯ ಎಂ.ಎಂ. ಭುವನಾ, ಪೊನ್ನಂಪೇಟೆ ಸರ್ಕಾರಿ ಶಾಲೆಯ ಬಿ.ಜೆ. ಜೀವನ್, ಹೆಗ್ಗಳ ಸರ್ಕಾರಿ ಶಾಲೆಯ ಶೀತಲ್, ಮಾಯಮುಡಿ ಸರ್ಕಾರಿ ಶಾಲೆಯ ರೋಷನ್ ಬಿ.ಎಲ್., ಪಿಯುಸಿಯಲ್ಲಿ ಅತಿ ಹೆಚ್ಚ ಅಂಕ ಪಡೆದ ಗೋಣಿಕೊಪ್ಪದ ವಿದ್ಯಾನಿಕೇತನ ಶಾಲೆಯ ರಂಜನಾ ಇವರುಗಳನ್ನು ಸನ್ಮಾನಿಸಲಾಯಿತು.
ಶಿಕ್ಷಣ ಇಲಾಖೆಯ ವನಜಾಕ್ಷಿ ಸ್ವಾಗತಿಸಿದರು. ಶಿಕ್ಷಕಿ ಗೀತಾಂಜಲಿ ನಿರೂಪಿಸಿದರು. ಶಿಕ್ಷಕ ಎ.ವಿ. ಮಂಜುನಾಥ್ ವಂದಿಸಿದರು.