ಕೂಡಿಗೆ, ನ. 1: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್ ನಂ. 175ರ ಬೂತ್ ಸಮಿತಿ ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ಬೂತ್ ಸಮಿತಿಯ ಸಭೆ ನಡೆಯಿತು.
ಸಭೆಯಲ್ಲಿ ಬಿ.ಜೆ.ಪಿ.ಯ ಪಂಚರತ್ನ ಕಮಿಟಿಯನ್ನು ರಚನೆ ಮಾಡಲಾಯಿತು. ಶಕ್ತಿ ಕೇಂದ್ರದ ಪ್ರಮುಖ್ ಪ್ರವೀಣ್, ತಾಲೂಕು ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಬಗ್ಗೆ ಮತ್ತು ಪಕ್ಷ ಸಂಘಟನೆ ಬಗ್ಗೆ ಮಾತನಾಡಿದರು. ತಾಲೂಕು ಕಾರ್ಯದರ್ಶಿ ಗೌತಮ್, ಜಿಲ್ಲಾ ಕಾರ್ಯದರ್ಶಿ ಪುಷ್ಪ ನಾಗೇಶ್, ಮಹದೇವ್, ನಂದಕುಮಾರ್, ರುಕ್ಮಿಣಿ, ಪ್ರಜ್ವಲ್ ಹಾಗೂ ಬೂತ್ ಸಮಿತಿಯ ಸದಸ್ಯರು, ಪಕ್ಷದ ಮುಖಂಡರು ಭಾಗವಹಿಸಿದ್ದರು.