ಸೋಮವಾರಪೇಟೆ, ನ. 1: ಸಮೀಪದ ಮಾದಾಪುರ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಗಳನ್ನು ಸರಿಪಡಿಲು ಅಗತ್ಯ ಕ್ರಮ ಕೈಗೊಳ್ಳಲಾಗುವದು ಎಂದು ಮಾದಾಪುರ ಕ್ಷೇತ್ರವನ್ನು ಪ್ರತಿನಿಧಿಸುವ ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ತಿಳಿಸಿದರು.

ಆಸ್ಪತ್ರೆಯ ಅವ್ಯವಸ್ಥೆಗಳ ಬಗ್ಗೆ ‘ಶಕ್ತಿ’ಯಲ್ಲಿ ವರದಿ ಪ್ರಕಟವಾದ ಹಿನ್ನೆಲೆ ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪಾಧ್ಯಕ್ಷ ಅಭಿಮನ್ಯುಕುಮಾರ್ ಅವರು, 2017ರಲ್ಲಿ ನಿರ್ಮಾಣವಾಗಿರುವ ನೂತನ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ್ದ ವಾಟರ್ ಪ್ರೂಫ್ ಕಿತ್ತು ಬಂದಿರುವದನ್ನು ಗಮನಿಸಿದರು.

ಇದರಿಂದಾಗಿ ಮಳೆಗಾಲದಲ್ಲಿ ಮಳೆ ನೀರು ಛಾವಣಿಯಿಂದ ಕಟ್ಟಡದೊಳಗೆ ಬರುತ್ತಿದ್ದು, ಮಳೆ ನೀರನ್ನು ಸಂಗ್ರಹಿಸಲು ಬಕೇಟ್ ಇಡುವಂತಹ ಪರಿಸ್ಥಿತಿ ನಿರ್ಮಾಣ ವಾಗಿರುವದನ್ನು ಅರಿತು, ತಕ್ಷಣ ಮೇಲ್ಛಾವಣಿಗೆ ಸಿಮೆಂಟ್ ಶೀಟ್ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳು ವಂತೆ ಸ್ಥಳದಲ್ಲಿದ್ದ ಜಿ.ಪಂ. ಅಭಿಯಂತರ ವೀರೇಂದ್ರ ಅವರಿಗೆ ಸೂಚಿಸಿದರು.

ಇದರೊಂದಿಗೆ ಆಸ್ಪತ್ರೆಯಲ್ಲಿರುವ ಜನರೇಟರ್ ಸ್ಥಗಿತಗೊಂಡಿರುವ ಹಿನ್ನೆಲೆ ಬದಲಿ ವ್ಯವಸ್ಥೆ ಕಲ್ಪಿಸಲು ತಕ್ಷಣ ಸುರಕ್ಷಾ ಸಮಿತಿ ಸಭೆ ಕರೆಯಲಾ ಗುವದು. ವೈದ್ಯರ ವಸತಿ ಗೃಹ ದುರಸ್ತಿಗೆ ತಾ.ಪಂ.ನಿಂದ 1.50 ಲಕ್ಷ ಅನುದಾನ ಒದಗಿಸಲಾಗುವದು ಎಂದರು.

ಆಸ್ಪತ್ರೆ ಹಾಗೂ ವಸತಿ ಗೃಹದ ಸುತ್ತಲೂ ಬೆಳೆದು ನಿಂತಿರುವ ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಚತೆ ಕಾಪಾಡಲು ಕ್ರಮ ಕೈಗೊಳ್ಳುವಂತೆ ಮಾದಾಪುರ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಕುಮಾರ್ ಅವರಿಗೆ ಸೂಚಿಸಿದರು.

ಆಸ್ಪತ್ರೆಯ ಮೇಲ್ಛಾವಣಿಗೆ ಸಿಮೆಂಟ್ ಶೀಟ್‍ಗಳನ್ನು ಅಳವಡಿಸಲು ತಕ್ಷಣ ಎಸ್ಟಿಮೇಟ್ ತಯಾರಿಸುವಂತೆ ಅಭಿಯಂತರರಿಗೆ ಸೂಚಿಸಿದ್ದು, ಅನುದಾನ ಬಿಡುಗಡೆಗೆ ಶಾಸಕ ಅಪ್ಪಚ್ಚುರಂಜನ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಅಭಿಮನ್ಯುಕುಮಾರ್ ತಿಳಿಸಿದರು.

ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ‘ಶಕ್ತಿ’ ವರದಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಅಪ್ಪಚ್ಚು ರಂಜನ್, ವೈದ್ಯರ ವಸತಿ ಗೃಹಗಳ ದುರಸ್ತಿಗೆ ಕ್ರಮವಹಿಸ ಲಾಗಿದೆ. ಜನರೇಟರ್‍ಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಭೇಟಿ ನೀಡಿ ಬೇಡಿಕೆಯ ಬಗ್ಗೆ ಪರಿಶೀಲಿಸ ಲಾಗುವದು. ವಸತಿ ಗೃಹಗಳಲ್ಲಿಯೇ ವೈದ್ಯರು ಉಳಿಯುವಂತೆ ಸೂಚನೆ ನೀಡಲಾಗುವದು ಎಂದು ತಿಳಿಸಿದ್ದಾರೆ.