ಮಡಿಕೇರಿ, ನ. 1: ಜಿಲ್ಲೆಯಲ್ಲಿ ತಾ.1 ರಂದು ಹೊಸದಾಗಿ 20 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 70,088 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 4,912 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 4,698 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 68 ಮಂದಿ ಸಾವನ್ನಪ್ಪಿದ್ದು 146 ಪ್ರಕರಣ ಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 39 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 31 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 76 ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 178 ನಿಯಂತ್ರಿತ ವಲಯಗಳಿವೆ.