ಮಡಿಕೇರಿ, ನ. 2: ಕಾರೊಂದು ಬೈಕ್‍ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಡಿಕೇರಿ - ಮೈಸೂರು ಹೆದ್ದಾರಿಯ ಆನೆಕಾಡು ಬಳಿ ಸಂಭವಿಸಿದೆ. ಮೈಸೂರು ಕಡೆಯಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ಕಾಸರಗೋಡಿನಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಬೈಕ್‍ಗೆ ಆನೆಕಾಡು ಬಳಿ ಡಿಕ್ಕಿ ಹೊಡೆದಿದೆ. ಬೈಕ್‍ನಲ್ಲಿದ್ದ ಈರ್ವರಿಗೆ ಗಂಭೀರ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಾಗಿದೆ. ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಅಚ್ಚಮ್ಮ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. - ಟಿ.ಜಿ. ಸತೀಶ್