ಮಡಿಕೇರಿ, ನ. 3: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಭೂಖರೀದಿ ಯೋಜನೆ ಮತ್ತು ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದ್ದು, ತಾ. 12 ರೊಳಗೆ ಅರ್ಜಿ ಸಲ್ಲಿಸಬಹುದು.

ತಾ. 12 ರವರೆಗೆ ನಿಗಮದ ವೆಬ್‍ಸೈಟ್ ತಿತಿತಿ.ಜbಛಿಜಛಿ. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ನಿಗಮದ ದೂ. 08272-221656 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.