ಮಡಿಕೇರಿ, ನ. 4: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಜೆ.ಜಿ ಮಂಜುನಾಥ ಅವರು 2019ನೇ ಸಾಲಿನ ಜಾಗತಿಕ ಮಟ್ಟದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನವನ್ನು ಪಡೆದಿದ್ದಾರೆ. ಯು.ಎಸ್.ಎ. ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾನಿಲಯ ನಡೆಸಿದ ಸಮೀಕ್ಷೆಯಲ್ಲಿ ಅನಲಿಟಿಕಲ್ ಕೆಮಿಸ್ಟ್ರಿ ಮತ್ತು ಎನರ್ಜಿ ಕ್ಷೇತ್ರದಲ್ಲಿ ಸಂಶೋಧನೆ ಮಾಡಿರುವ ಪ್ರಪಂಚದ ಅಗ್ರ 2% ವಿಜ್ಞಾನಿಗಳಲ್ಲಿ ಸ್ಥಾನ ಪಡೆದಿದ್ದಾರೆ. ಡಾ. ಜೆ.ಜಿ. ಮಂಜುನಾಥ ಈವರೆಗೆ 93 ಅಂತರ್ರಾಷ್ಟ್ರೀಯ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದು ಪ್ರಸುತ್ತ 7 ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.