ಸೋಮವಾರಪೇಟೆ, ನ. 4: ತಾಲೂಕಿನ ಜಕ್ಕನಳ್ಳಿ ಹಾಗೂ ನೇಗಳ್ಳೆ ಗ್ರಾಮ ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ರೂ. 1.20 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ರೂ. 80 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುವ ಜಕ್ಕನಳ್ಳಿ-ಕುಮಾರಳ್ಳಿ ರಸ್ತೆ, ರೂ. 60 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುವ ನೇಗಳ್ಳೆ-ಕರ್ಕಳ್ಳಿ ರಸ್ತೆ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದರು. ಈ ಸಂದರ್ಭ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಸದಸ್ಯ ಧರ್ಮಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ನೇಗಳ್ಳೆ ಜೀವನ್, ಕಿಬ್ಬೆಟ್ಟ ಮಧು ಸೇರಿದಂತೆ ಸ್ಥಳೀಯ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.