ಶಾಲೆ ಪುನಾರಂಭ ಕುರಿತು ಸದÀ್ಯದಲ್ಲೇ ನಿರ್ಧಾರ
ಬೆಂಗಳೂರು, ನ. 4: ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಮುಂದಿನ ಐದು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಹೇಳಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರದ ಸಭೆಯಲ್ಲಿ ಶಾಲಾ ಪುನಾರಂಭ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು. ಸಂಬಂಧಿಸಿದ ಇಲಾಖೆಗಳ ಎಲ್ಲಾ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ ಮತ್ತು ಸನ್ನಿವೇಶಗಳನ್ನು ಪರಿಶೀಲಿಸಲಾಗುತ್ತಿದೆ. ಎಲ್ಲಾ ವಲಯಗಳಿಂದ ಪ್ರತಿಕ್ರಿಯೆ ಪಡೆದ ನಂತರ ಅದನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಮುಂದಿನ ವರ್ಷ ಶಿಕ್ಷಕರ ಅರ್ಹತಾ ಪರೀಕ್ಷೆ
ನವದೆಹಲಿ, ನ. 4: ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಕಾರಣದಿಂದ ಮುಂದೂಡಲ್ಪಟ್ಟಿರುವ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದಿನ ವರ್ಷ ಜ. 31 ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೆÇಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ. ಈ ಹಿಂದೆ ಜು. 5 ರಂದು ಪರೀಕ್ಷೆ ನಿಗದಿಯಾಗಿತ್ತು. 14ನೇ ಆವೃತ್ತಿಯ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ಜುಲೈನಲ್ಲಿ ದೇಶಾದ್ಯಂತ 112 ನಗರಗಳಲ್ಲಿ ನಡೆಯಬೇಕಿತ್ತು. ಆದರೆ, ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲ್ಪಟ್ಟಿದ್ದು, ಈ ಪರೀಕ್ಷೆಯನ್ನು ಇದೀಗ ಮುಂದಿನ ವರ್ಷದ ಜನವರಿ 31 ರಂದು ನಡೆಸಲಾಗುವುದು ಎಂದು ನಿಶಾಂಕ್ ಹೇಳಿದ್ದಾರೆ. ಸಾಮಾಜಿಕ ಅಂತರ ಮತ್ತಿತರ ಸುರಕ್ಷತಾ ಕ್ರಮಗಳೊಂದಿಗೆ 135 ನಗರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಪೆÇಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.
ರಾಜ್ಯದಲ್ಲಿ 2 ಕೋಟಿ ಮಂದಿಗೆ ಕೋವಿಡ್
ಬೆಂಗಳೂರು, ನ. 4: ರಾಜ್ಯದಲ್ಲಿ ಈಗಾಗಲೇ ಮಹಾಮಾರಿ ಕೊರೊನಾ ವೈರಸ್ ಸುಮಾರು 2 ಕೋಟಿ ಜನರಿಗೆ ತಗುಲಿದೆ ಎಂಬುದು ಕರ್ನಾಟಕ ಸರ್ಕಾರ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ. ಕರ್ನಾಟಕದಲ್ಲಿ ಸೆ. 16 ರ ವೇಳೆ ಕನಿಷ್ಟ 1.93 ಕೋಟಿ ಅಥವಾ ಶೇ. 27.3 ರಷ್ಟು ಜನರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಅಥವಾ ಈಗಾಗಲೇ ಬಂದು ಹೋಗಿದೆ ಎಂಬುದು ರಾಜ್ಯದಲ್ಲಿ ಕೋವಿಡ್-19 ಹರಡುವಿಕೆಯನ್ನು ಅಂದಾಜು ಮಾಡಲು ಸರ್ಕಾರ ನಡೆಸಿದ ಸಮೀಕ್ಷೆ ಬಹಿರಂಗಪಡಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಸಮೀಕ್ಷೆಯ ವಿವರ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು, ಈ ಸರ್ವೆ 2020ರ ಸೆಪ್ಟೆಂಬರ್ 3 ರಿಂದ 16 ರವರೆಗೆ ನಡೆದಿದೆ. ಕೋವಿಡ್ ಮರಣ ಪ್ರಮಾಣವನ್ನು ಸೋಂಕಿಗೆ ಒಳಗಾದ ಒಟ್ಟು ಜನರಿಗೆ ಹೋಲಿಸಿದರೆ, ಬಹಳ ಕಡಿಮೆ ಇದೆ. ರಾಜ್ಯದಲ್ಲಿ ಮರಣ ಪ್ರಮಾಣ ಶೇ. 0.05 ಇದೆ. ಮುಂಬೈಯಲ್ಲಿ ಶೇ. 0.05-0.10, ಪುಣೆಯಲ್ಲಿ ಶೇ. 0.08, ದೆಹಲಿಯಲ್ಲಿ ಶೇ. 0.09, ಚೆನ್ನೈನಲ್ಲಿ ಶೇ. 0.13 ಮರಣ ಪ್ರಮಾಣವಿದೆ ಎಂದು ವಿವರಿಸಿದರು.
ಪೊಲೀಸರಿಂದ ಹಲ್ಲೆಯಾಗಿದೆ ಎಂದ ಅರ್ನಬ್
ರಾಯ್‍ಗಢ್, ನ. 4: ತಮ್ಮನ್ನು ಬಂಧಿಸುವ ಮುನ್ನ ಪೆÇಲೀಸರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಆರೋಪಿಸಿದ್ದಾರೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿ ಪ್ರಚೋದನೆ ನೀಡಿದ್ದರು ಎಂಬ ಆರೋಪದ ಮೇಲೆ ಇಂದು ಬೆಳಿಗ್ಗೆ ಅವರ ನಿವಾಸಕ್ಕೆ ದಾಳಿ ನಡೆಸಿದ ಮುಂಬೈ ಪೆÇಲೀಸರು ಅವರನ್ನು ಬಂಧಿಸಿ ಪೆÇಲೀಸ್ ಠಾಣೆಗೆ ಕರೆದುಕೊಂಡು ಹೋದರು. ರಾಯ್‍ಗಢ ಜಿಲ್ಲೆಯ ಅಲಿಬೌಗ್ ಪೆÇಲೀಸ್ ಠಾಣೆಗೆ ಪೆÇಲೀಸ್ ವಾಹನದಲ್ಲಿ ಕರೆತರುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅರ್ನಬ್ ಗೋಸ್ವಾಮಿ, ನನ್ನ ಮೇಲೆ ಪೆÇಲೀಸರು ದೈಹಿಕ ಹಲ್ಲೆ ನಡೆಸಿದ್ದಾರೆ ಎಂದರು. ಆದರೆ ಪೆÇಲೀಸರು ಕಾನೂನು ಪ್ರಕಾರ ಕೆಲಸ ಮಾಡುತ್ತಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‍ಮುಖ್ ಹೇಳುತ್ತಾರೆ. ಕಾನೂನಿಗಿಂತ ಮೇಲೆ ಯಾರೂ ಅಲ್ಲ, ಮಹಾರಾಷ್ಟ್ರ ಪೆÇಲೀಸರು ಕಾನೂನು ಪ್ರಕಾರ ನಡೆದುಕೊಳ್ಳುತ್ತಾರೆ ಎಂದರು. ಅರ್ನಬ್ ಗೋಸ್ವಾಮಿ ತಮಗೆ ಬಾಕಿ ಹಣವನ್ನು ನೀಡಿರಲಿಲ್ಲ ಎಂದು ಆರೋಪಿಸಿ ಡೆತ್‍ನೋಟ್ ಬರೆದಿಟ್ಟು 2018ರ ಮೇ ತಿಂಗಳಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ರಾಜ್ಯದ ಮುಖ್ಯಮಂತ್ರಿ ಬದಲಾಗಲಿದ್ದಾರೆ !
ಮೈಸೂರು, ನ. 4: ಉಪಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಎರಡು ದಿನಗಳ ಪ್ರವಾಸಕ್ಕಾಗಿ ನಗರಕ್ಕೆ ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುತ್ತಾರೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. ನನಗೆ ತುಂಬು ನಂಬಿಕೆ ಇದೆ ಯಡಿಯೂರಪ್ಪ ಬದಲಾಗುತ್ತಾರೆ ಎಂಬುದು ಖಚಿತ. ತಮಗೆ ದೆಹಲಿಯಿಂದಿರುವ ಮಾಹಿತಿ ಆಧಾರದ ಮೇಲೆ ಈ ಮಾಹಿತಿ ನೀಡುತ್ತಿದ್ದೇನೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು, ಅದು ಒಂದು ಕಾರಣ ಇರಬಹುದು. ಹಲವು ದಿನದಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ
ಬೆಂಗಳೂರು, ನ. 4: ಉಪಚುನಾವಣೆ ಮುಗಿಯುತ್ತಿದ್ದಂತೆ ಸರ್ಕಾರ ರಾಜ್ಯದ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ. ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 40 ಪೈಸೆ ಹೆಚ್ಚಿಸಿದ್ದು, ನವೆಂಬರ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ. ಕಳೆದ ಮಾರ್ಚ್‍ನಿಂದಲೇ ದರ ಹೆಚ್ಚಳವಾಗಬೇಕಿತ್ತು. ಆದರೆ ಕೊರೊನಾ ಮತ್ತು ಆರ್‍ಆರ್ ನಗರ, ಶಿರಾ ಉಪ ಚುನಾವಣೆ ಕಾರಣದಿಂದ ತಡೆಹಿಡಿಯಲಾಗಿದ್ದ ದರ ಹೆಚ್ಚಳ ಪ್ರಸ್ತಾವಕ್ಕೆ ಸರ್ಕಾರ ಇಂದು ಒಪ್ಪಿಗೆ ಸೂಚಿಸಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ 40 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ.
ಕೇರಳದಲ್ಲಿ ಸಿಬಿಐಗೆ ಸರ್ಕಾರದ ಒಪ್ಪಿಗೆ ಬೇಕು
ತಿರುವನಂತಪುರಂ, ನ. 4: ಮಹಾರಾಷ್ಟ್ರ ನಂತರ ಇದೀಗ ಕೇರಳ ಸಹ ಸಿಬಿಐಗೆ ನೀಡಲಾಗಿದ್ದ ಸಾಮಾನ್ಯ ಒಪ್ಪಿಗೆ ಹಿಂಪಡೆದಿದ್ದು, ಇನ್ನು ಮುಂದೆ ದೇವರ ನಾಡಿನಲ್ಲಿ ಯಾವುದೇ ಪ್ರಕರಣಗಳ ತನಿಖೆ ನಡೆಸಲು ಸಿಬಿಐ, ರಾಜ್ಯ ಸರ್ಕಾರದ ಅನುಮತಿ ಪಡೆಯುವ ಅಗತ್ಯವಿದೆ. ಇತ್ತೀಚಿಗಷ್ಟೇ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ, ಸಿಬಿಐಗೆ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂದಕ್ಕೆ ಪಡೆದಿತ್ತು. ಈಗ ಕೇರಳ ಸಹ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದೆ. ಅನಿಲ್ ಅಕ್ಕಾರ ಅವರ ಮನವಿಯ ಮೇರೆಗೆ ಸಿಬಿಐ ಲೈಫ್ ಮಿಷನ್ ಯೋಜನೆಗೆ ಸಂಬಂಧಿಸಿದ ಆರೋಪಗಳ ಬಗ್ಗೆ ತನಿಖೆ ಆರಂಭಿಸಿತ್ತು. ಅಲ್ಲದೆ ಈ ಸಂಬಂಧ ಕೆಲವು ಅಧಿಕಾರಿಗಳಿಗೆ ಸಮನ್ಸ್ ಸಹ ನೀಡಿತ್ತು. ಇದರ ಬೆನ್ನಲ್ಲೇ ಕೇರಳ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಕೊಹ್ಲಿ ದಾಖಲೆ ಮುರಿದ ವಾರ್ನರ್
ಬೆಂಗಳೂರು, ನ. 4: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನೂತನ ದಾಖಲೆಗಳು ನಿರ್ಮಾಣವಾಗುತ್ತಿರುತ್ತವೆ. ಅದೇ ರೀತಿ ಆ ದಾಖಲೆಗಳನ್ನು ಮತ್ತೊಬ್ಬರು ಮುರಿಯುವುದು ಸಹಜ. ಇದೀಗ ಕೊಹ್ಲಿಯ ದಾಖಲೆಯೊಂದನ್ನು ಡೇವಿಡ್ ವಾರ್ನರ್ ಪುಡಿಗಟ್ಟಿದ್ದಾರೆ. ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್ ಮಾಡಿದ್ದು 500ಕ್ಕೂ ಹೆಚ್ಚು ರನ್ ಬಾರಿಸಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ. ಸನ್‍ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಐಪಿಎಲ್ 6ನೇ ಬಾರಿಗೆ 500 ಪ್ಲಸ್ ರನ್ ಕಲೆ ಹಾಕಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಐಪಿಎಲ್ ಒಟ್ಟಾರೆ ಆವೃತ್ತಿಯಲ್ಲಿ 5 ಬಾರಿ 500 ಪ್ಲಸ್ ರನ್ ಬಾರಿಸಿದ್ದರು.