ಮಡಿಕೇರಿ, ನ. 4: ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ರಾಜ್ಯದ ವಿವಿಧೆಡೆ ಹಾಗೂ ಕೇರಳ ರಾಜ್ಯದಲ್ಲಿ ಬೈಕ್ ಕಳ್ಳತನ ಮಾಡಿದ್ದ ಪ್ರಕರಣ ವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ದಂತೆ ಒಟ್ಟು ಐದು ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಬಂಧಿತ ಇಬ್ಬರು ಬಾಲಾಪರಾಧಿಗಳು ಕೇರಳದ ಕಾಸರಗೋಡು ಜಿಲ್ಲೆಯವರಾಗಿದ್ದು, ಇವರನ್ನು ಇದೀಗ ಬಾಲಾಪರಾಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಪ್ರಕರಣದ ವಿವರ: ಮಡಿಕೇರಿ ನಗರ ಪೊಲೀಸ್ ಠಾಣಾ ಸರಹದ್ದಿನ ಜಿ.ಟಿ. ವೃತ್ತದ ಬಳಿಯಿರುವ ಪ್ರವಾಸಿ ಮಂದಿರದ ಪಾರ್ಕಿಂಗ್ ಸ್ಥಳದಲ್ಲಿ ತಾ. 30.10.2020 ರಂದು ಸಿ.ಆರ್. ತಿಮ್ಮಯ್ಯ ಎಂಬವರು ಅವರ ಟಿವಿಎಸ್ ಅಪಾಚಿ ಮೋಟಾರು ಬೈಕನ್ನು ನಿಲ್ಲಿಸಿದ್ದು, ಸದರಿ ಮೋಟಾರು ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಮಡಿಕೇರಿ ನಗರ ಪೊಲೀಸ್ ಠಾಣೆಗೆ ನೀಡಿದ ಪುಕಾರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಈ ಬಗ್ಗೆ ಮಡಿಕೇರಿ ನಗರ ವೃತ್ತದ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ನೇತೃತ್ವದಲ್ಲಿ ಆರೋಪಿಗಳ ಪತ್ತೆ ಬಗ್ಗೆ ತಂಡವನ್ನು ರಚಿಸಲಾಗಿತ್ತು. ತಂಡವು ಮಡಿಕೇರಿಯ ಜಿ.ಟಿ. ವೃತ್ತದ ಬಳಿಯಿರುವ
(ಮೊದಲ ಪುಟದಿಂದ) ಪ್ರವಾಸಿ ಮಂದಿರದ ಪಾರ್ಕಿಂಗ್ ಸ್ಥಳದಲ್ಲಿ ಕಳ್ಳತನವಾಗಿದ್ದ ಟಿವಿಎಸ್ ಅಪಾಚಿ ಮೋಟಾರು ಬೈಕ್ ಸೇರಿದಂತೆ ರಾಜ್ಯದ ಬೆಂಗಳೂರು ಹಾಗೂ ಮಂಡ್ಯ ನಗರದಲ್ಲಿ ಮತ್ತು ಅಂತರ್ರಾಜ್ಯವಾದ ಕೇರಳದ ಕಣ್ಣೂರಿನಲ್ಲಿ ಕಳುವಾಗಿದ್ದ ಒಟ್ಟು 5 ವಿವಿಧ ಕಂಪೆನಿಯ ಮೋಟಾರು ಬೈಕ್‍ಗಳನ್ನು ವಶಪಡಿಸಿಕೊಂಡಿದ್ದು, ವಶಪಡಿಸಿ ಕೊಂಡ ಸ್ವತ್ತುಗಳ ಅಂದಾಜು ಮೌಲ್ಯ ರೂ. 2.25 ಲಕ್ಷಗಳಾಗಿದೆ.
ಎಸ್ಪಿ ಕ್ಷಮಾ ಮಿಶ್ರಾ ನಿರ್ದೇಶನ ದಂತೆ ಮಡಿಕೇರಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬಿ.ಪಿ. ದಿನೇಶ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ನೇತೃತ್ವದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣಾ ಸಹಾಯಕ ಉಪ ನಿರೀಕ್ಷಕರಾದ ಗೋವಿಂದರಾಜು, ಹೊನ್ನಪ್ಪ ಕೆ.ಜಿ, ಮೊಹಮ್ಮದ್ ಅಕ್ಮಲ್, ಮಡಿಕೇರಿ ನಗರ ಪೊಲೀಸ್ ಠಾಣಾ ಅಪರಾಧ ಪತ್ತೆ ಕರ್ತವ್ಯದ ಸಿಬ್ಬಂದಿಗಳಾದ ಕೆ.ಕೆ. ದಿನೇಶ್, ಶ್ರೀನಿವಾಸ್, ಪ್ರವೀಣ್ ಬಿ.ಕೆ., ನಾಗರಾಜ್ ಕಡಗನ್ನವರ್, ಸಿಬ್ಬಂದಿಗಳಾದ ಅರುಣ್ ಕುಮಾರ್ ಬಿ.ಜಿ., ನಂದಕುಮಾರ್, ಎ.ಆರ್. ಮನು, ಭವಾನಿ ಅವರುಗಳನ್ನು ಒಳಗೊಂಡ ತಂಡವು ಪ್ರಕರಣವನ್ನು ಭೇದಿಸುವಲ್ಲಿ ಯಸ್ವಿಯಾಗಿದೆ.