ಸೋಮವಾರಪೇಟೆ, ನ. 4: ಲೋಕೋಪಯೋಗಿ ಇಲಾಖೆ ಮೂಲಕ ರೂ. 50 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ತಾಲೂಕಿನ ಮಸಗೋಡು-ಯಲಕನೂರು ಕಾಂಕ್ರಿಟ್ ರಸ್ತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ಕಳೆದ ಹಲವು ವರ್ಷಗಳಿಂದ ಗುಂಡಿ ಬಿದ್ದಿದ್ದ ಡಾಂಬರು ರಸ್ತೆಯಲ್ಲಿ ವಾಹನ ಸಂಚಾರ ಕಷ್ಟಸಾಧ್ಯವಾಗಿದ್ದು, ಈ ಭಾಗದ ಸಾರ್ವಜನಿಕರು ರಸ್ತೆಗಾಗಿ ಆಗಾಗ್ಗೆ ಬೇಡಿಕೆ ಸಲ್ಲಿಸುತ್ತಿದ್ದರು. ಇದೀಗ ಲೋಕೋಪಯೋಗಿ ಇಲಾಖೆ ಮೂಲಕ ರೂ. 50 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ.
ರಸ್ತೆ ಉದ್ಘಾಟನೆ ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.