ಕೂಡಿಗೆ, ನ. 5: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ ಬಸವತ್ತೂರು ಗ್ರಾಮದ ಮೂಡ್ಲಿಗೌಡ ಸಭಾಂಗಣದಲ್ಲಿ ತಾಲೂಕು ಶಕ್ತಿ ಕೇಂದ್ರದ ಉಪಾಧ್ಯಕ್ಷ ಕೆ. ವರದ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಲು ಬೇಕಾಗುವ ಯೋಜನೆಗಳ ಬಗ್ಗೆ ಚರ್ಚೆ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ತಾಲೂಕು ಶಕ್ತಿ ಪ್ರಮುಖ ಕೇಂದ್ರದ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಕ್ತಿ ಕೇಂದ್ರದ ಜವಾಬ್ದಾರಿ ಪ್ರಮುಖವಾಗಿರುತ್ತದೆ. ಅದರ ಮೂಲಕ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟನೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ ಚುನಾವಣೆಯ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಪ್ರಯತ್ನ ಮಾಡಬೇಕಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಜಿಲ್ಲಾ ಬಿಜೆಪಿ ಎಸ್‍ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಿ.ಆರ್. ಪ್ರಭಾಕರ್, ಜಿಲ್ಲಾ ಬಿ.ಜೆ.ಪಿ. ಎಸ್‍ಸಿ ಘಟಕದ ಉಪಾಧ್ಯಕ್ಷ ಕುಮಾರಸ್ವಾಮಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗಣಿಪ್ರಸಾದ್, ತಾಲೂಕು ಶಕ್ತಿ ಕೇಂದ್ರದ ಕಾರ್ಯದರ್ಶಿ ಗೌತಮ್, ಮಹಿಳಾ ಕಾರ್ಯದರ್ಶಿ ಇಂದಿರಾ, ಕೂಡುಮಂಗಳೂರು ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಮಂಜುನಾಥ, ಗುರುಲಿಂಗಪ್ಪ, ಪ್ರವೀಣ ಸನ್ಮಾನಿಸಿ ಅಧಿಕಾರ ಹಸ್ತಾಂತರಿಸಲಾಯಿತು. ಕೂಡುಮಂಗಳೂರು-ಬಸವತ್ತೂರು ಗ್ರಾಮದ ಕಾರ್ಯಕರ್ತರು ಮತ್ತು ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.