ಅಮೇರಿಕಾ ಚುನಾವಣೆ ಅಂತಿಮ ಘಟ್ಟ

ವಾಷಿಂಗ್ಟನ್, ನ. 5: ಜಗತ್ತಿನಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಅಮೇರಿಕಾ ಅಧ್ಯಕ್ಷೀಯ ಚುನಾವಣೆಯ ಹಣಾಹಣಿ ಹೋರಾಟ ಅಂತಿಮ ಘಟ್ಟ ತಲುಪಿದ್ದು, ರಿಪಬ್ಲಿಕನ್ ಪಕ್ಷದ, ಅಮೇರಿಕಾ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮೋಕ್ರಾಟಿಕ್ ಪಕ್ಷದ ಜೋ ಬೈಡನ್ ಇಬ್ಬರೂ ಗೆಲುವಿನ ಸನಿಹದಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಅಧಿಕೃತವಾಗಿ ವಿಜೇತ ಅಭ್ಯರ್ಥಿಯ ಹೆಸರು ಇನ್ನು ಘೋಷಣೆಯಾಗಿಲ್ಲ. ಮತ ಎಣಿಕೆ ಮುಂದುವರೆದಿದ್ದು, ಟ್ರಂಪ್ ಮತ್ತು ಬೈಡನ್ ಇಬ್ಬರೂ ಅಮೇರಿಕಾದ ಪ್ರಮುಖ ರಾಜ್ಯಗಳನ್ನು ಗೆದ್ದಿದ್ದಾರೆ. ಆದರೆ ಶ್ವೇತಭವನ ಸ್ಪರ್ಧೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು 538 ಸದಸ್ಯರ ಎಲೆಕ್ಟೋರಲ್ ಕಾಲೇಜ್ ನಿರ್ಧರಿಸಲಿದೆ. ಜಾರ್ಜಿಯಾ, ಪೆನ್ಸಿಲ್ವೇನಿಯಾ, ನಾರ್ತ್ ಕೆರೊಲಿನಾ ಮತ್ತು ನೆವಾಡಾ ಈ ನಾಲ್ಕು ರಾಜ್ಯಗಳಲ್ಲಿನ ಫಲಿತಾಂಶಗಳು ಇನ್ನೂ ಘೋಷಣೆಯಾಗಿಲ್ಲ. ಡೆಮೋಕ್ರಾಟಿಕ್ ಅಭ್ಯರ್ಥಿ ಜೋ ಬೈಡನ್ ಅಮೇರಿಕಾ ಅಧ್ಯಕ್ಷರಾಗಲಿರುವುದು ನಿಚ್ಚಳಗೊಳ್ಳುತ್ತಿದೆ. ಈವರೆಗೆ ಬೈಡೆನ್ ಅವರು 253 ಎಲಕ್ಟ್ರೋಲ್ ಮತ ಪಡೆದುಕೊಂಡಿದ್ದು, ಟ್ರಂಪ್ 213 ಮತಗಳಿಸಿದ್ದಾರೆ. ಇನ್ನೂ ಮತಗಳ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಕೆಲವೇ ಗಂಟೆಗಳಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.

ಮಸೀದಿ ಧ್ವನಿವರ್ಧಕÀ ತೆರವಿಗೆ ಆದೇಶ

ಬೆಂಗಳೂರು, ನ. 5: ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ರಾಜ್ಯ ಪೆÇಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಮಾಡಿದ್ದಾರೆ. ಕಳೆದ ತಿಂಗಳು ವಕೀಲ ಹರ್ಷ ಮುತಾಲಿಕ್, ಮಸೀದಿಯಲ್ಲಿನ ಧ್ವನಿ ವರ್ಧಕಗಳಿಂದ ಇತರ ಧರ್ಮದರಿಗೆ ತೊಂದರೆ ಆಗುತ್ತಿದೆ. ದಿನಕ್ಕೆ ಐದಾರು ಬಾರಿ ಪ್ರಾರ್ಥನೆ ಮಾಡಲಾಗುತ್ತಿದೆ. ಇದ್ದರಿಂದ ಮಕ್ಕಳಿಗೆ, ವಯಸ್ಸಾದವರಿಗೆ, ಹೃದಯ ಸಂಬಂಧಿ ಖಾಯಿಲೆ ಇರುವವರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಬೇಕು ಎಂದು ದೂರು ನೀಡಿದ್ದರು. ಈಗ ಈ ದೂರಿಗೆ ಸ್ಪಂದಿಸಿದ ಡಿಜಿ ಪ್ರವೀಣ್ ಸೂದ್ ರಾಜ್ಯದ ಎಲ್ಲ ಜಿಲ್ಲೆಗಳ ಎಸ್ಪಿಗಳಿಗೆ ಹಾಗೂ ನಗರದ ಕಮಿಷನರ್ಗೆ ಪತ್ರ ಬರೆದಿದ್ದು, ರಾಜ್ಯಾದ್ಯಂತ ಮಸೀದಿಗಳಲ್ಲಿ ಹಾಕಿರುವ ಅನಧಿಕೃತ ಧ್ವನಿವರ್ಧಕ ತೆರವಿಗೆ ಆದೇಶ ಮಾಡಿದ್ದಾರೆ. ಜೊತೆಗೆ ಯಾವುದೇ ಅನಧಿಕೃತ ಧ್ವನಿವರ್ಧಕ ಬಳಕೆ ಮಾಡಿದ್ದರೆ, ಅದರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ತೆರವುಗೊಳಿಸಲು ಸೂಚಿಸಿದ್ದಾರೆ.

ಲವ್ ಜಿಹಾದ್ ವಿರುದ್ಧ ಕಾನೂನು

ಬೆಂಗಳೂರು, ನ. 5: ಸಮಾಜದಲ್ಲಿ ಅಶಾಂತಿ ಮೂಡಿಸುವ, ಸಾಮಾಜಿಕ ಪಿಡುಗಾಗಿರುವ ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಪುನರುಚ್ಚರಿಸಿದ್ದಾರೆ. ಲವ್ ಜಿಹಾದ್ ತಡೆಯಲು ಬೇರೆ ಬೇರೆ ರಾಜ್ಯಗಳಲ್ಲಿ ಕಾನೂನು ತರಲು ಹೊರಟಿವೆ. ಹೀಗಾಗಿ ಅವುಗಳ ಅಧ್ಯಯನ ಮಾಡುವ ಜೊತೆಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ನಂತರ ಕಾನೂನು ತರುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. 7-8 ವರ್ಷಗಳಿಂದ ದೇಶದಾದ್ಯಂತ ಚರ್ಚೆಯಾಗುತ್ತಿದೆ. ವಿಶೇಷವಾಗಿ 7-8 ರಾಜ್ಯಗಳಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಹೆಚ್ಚಿನ ಪ್ರಕರಣಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಶಾಲೆ ಆರಂಭ:262 ವಿದ್ಯಾರ್ಥಿಗಳಿಗೆ ಕೋವಿಡ್

ಅಮರಾವತಿ, ನ. 5: ಆಂಧ್ರಪ್ರದೇಶದಲ್ಲಿ ಶಾಲೆಗಳು ಆರಂಭವಾದ ಬಳಿಕ ಕೊರೊನಾ ಸಾಂಕ್ರಾಮಿಕ ಶಾಕ್ ನೀಡಿದ್ದು, 262 ವಿದ್ಯಾರ್ಥಿಗಳು, 160 ಶಿಕ್ಷಕರಿಗೆ ಕೊರೊನಾ ಸೋಂಕು ತಗಲಿದೆ. ತಾ. 2 ರಂದು ಆಂಧ್ರಪ್ರದೇಶ ಸರ್ಕಾರ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಶಾಲೆಗಳನ್ನು ತೆರೆಯಲಾಗಿತ್ತು. ಕೋವಿಡ್ ಮಾರ್ಗಸೂಚಿ ಅನ್ವಯವೇ ನಿಯಮಗಳನ್ನು ಪಾಲಿಸಿ ಶಾಲೆಗಳನ್ನು ಆರಂಭಿಸಲಾಗಿತ್ತು. ಪ್ರತಿ ಕೊಠಡಿಯಲ್ಲಿ ಗರಿಷ್ಠ 15 ರಿಂದ 16 ಮಕ್ಕಳನ್ನು ಮಾತ್ರ ಕೂರಿಸಲಾಗಿತ್ತು ಎಂದು ಸರ್ಕಾರ ಹೇಳಿದೆ. ಆದಾಗ್ಯೂ 262 ವಿದ್ಯಾರ್ಥಿಗಳು, 160 ಶಿಕ್ಷಕರಿಗೆ ಕೊರೊನಾ ಸೋಂಕು ಬಂದಿದೆ. ಈ ಬಗ್ಗೆ ಮಾತನಾಡಿರುವ ಶಾಲಾ ಶಿಕ್ಷಣ ಆಯುಕ್ತ ವಿ. ಚಿನ್ನ ವೀರಭದ್ರುಡು ಅವರು, ಶಾಲಾ ವಿದ್ಯಾರ್ಥಿಗಳಿಗ ಕೊರೊನಾ ಸೋಂಕಿನ ಅಂಕಿಅಂಶ ಆತಂಕಕಾರಿಯಲ್ಲ. ಶಾಲೆಗಳು ಆರಂಭವಾದ ಬಳಿಕ ಶಾಲೆಗಳಿಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಕೆ ಮಾಡಿದರೆ ಸೋಂಕಿಗೆ ತುತ್ತಾದ ವಿದ್ಯಾರ್ಥಿಗಳ ಸಂಖ್ಯೆ ಶೇ. 0.1ರಷ್ಟೂ ಇಲ್ಲ. ಶಾಲೆಗಳು ಆರಂಭವಾಗಿದ್ದರಿಂದಲೇ ವಿದ್ಯಾರ್ಥಿಗಳಿಗೆ ಸೋಂಕು ಬಂದಿದೆ ಎಂದು ಹೇಳುವುದು ತಪ್ಪು. ಸೋಂಕು ಶಾಲೆಯಿಂದಲ್ಲದೇ ಬೇರಾವುದೇ ಮಾರ್ಗದಿಂದಲೂ ಅವರಿಗೆ ಸೋಂಕಿರಬಹುದು. ಅಧಿಕಾರಿಗಳು ಒದಗಿಸಿದ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ 9 ಮತ್ತು 10ನೇ ತರಗತಿಗೆ 9.75 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು,

ಹಾಸನಾಂಬೆ ಜಾತ್ರೆ ಆರಂಭ

ಹಾಸನ, ನ. 5: ಹಾಸನಾಂಬೆ ಜಾತ್ರೆಯ ಆರಂಭದ ದಿನ ದೇವಸ್ಥಾನದ ಬಾಗಿಲು ತೆರೆಯುವ ಸಂದರ್ಭದಲ್ಲೇ ಹಾಜರಿದ್ದು, ದರ್ಶನ ಪಡೆದಿದ್ದು ಸಂತಸ ನೀಡಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ಹೇಳಿದ್ದಾರೆ. ಹಾಸನಾಂಬ ದೇವಸ್ಥಾನ ಮತ್ತು ಸಿದ್ದೇಶ್ವರ ದೇವಸ್ಥಾನದ ಭೇಟಿಯ ನಂತರ ದೇವಾಲಯದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ಪ್ರತಿವರ್ಷದಂತೆ ಈ ವರ್ಷವೂ ಸಂಪ್ರದಾಯಗಳಿಗೆ ಲೋಪ ಉಂಟಾಗದಂತೆ ದರ್ಶನೋತ್ಸವಕ್ಕೆ ಚಾಲನೆ ನೀಡಲಾಗಿದೆ ಎಂದರು. ಕೊರೊನಾ ಸೋಂಕು ವ್ಯಾಪಕವಾಗಿ ಸಮುದಾಯದಲ್ಲಿ ಹರಡುತ್ತಿರುವ ಕಾರಣಾರ್ಥವಾಗಿ ಮುನ್ನೆಚ್ಚರಿಕೆಯಿಂದ ಜಿಲ್ಲೆಯ ಮತ್ತು ಹೊರ ಜಿಲ್ಲೆಯಿಂದ ಬರುವ ಭಕ್ತಾಧಿಗಳಿಗೆ ಈ ಬಾರಿ ಹಾಸನಾಂಬ ದೇವಾಲಯದ ದರ್ಶನಕ್ಕೆ ಅವಕಾಶವನ್ನು ನಿರ್ಬಂಧಿಸಲಾಗಿದೆ, ದೇವಾಲಯದ ಬಳಿ ಬಂದಿರುವ ಸಾರ್ವಜನಿಕರು ಹೊರಗಿನಿಂದಲೇ ದೇವಿಗೆ ನಮಸ್ಕರಿಸಿ ಆಶಿರ್ವಾದ ಪಡೆಯುವ ಮೂಲಕ ಸಹಕರಿಸಬೇಕೆಂದು ಸಚಿವರಾದ ಕೆ. ಗೋಪಾಲಯ್ಯ ಅವರು ಮನವಿ ಮಾಡಿದರು. ಇಂದು 12:30ಕ್ಕೆ ಜಿಲ್ಲಾಡಳಿತದಿಂದ ಸಕಲ ಗೌರವ ಹಾಗೂ ಪದ್ಧತಿಯಂತೆ ದೇವಾಲಯದ ಬಾಗಿಲು ತೆರೆಯಲಾಗಿದೆ. ಬಾಗಿಲು ತೆರೆದ ಸಂದರ್ಭದಲ್ಲಿ ಗರ್ಭಗುಡಿಯ ಎರಡು ದೀಪಗಳು ಉರಿಯುತ್ತಿತ್ತು. ತಾಯಿಯ ಆಶಿರ್ವಾದದಿಂದ ಕೊರೊನಾ ಸೋಂಕು ಬೇಗ ನಿವಾರಣೆಯಾಗಲಿ ಎಂದು ಪ್ರಾರ್ಥಿಸಿರುವುದಾಗಿ ಸಚಿವರು ಹೇಳಿದರಲ್ಲದೆ, ತಾ. 16 ರಂದು ಮಧ್ಯಾಹ್ನ 12 ಗಂಟೆಗೆ ವಿಧಿ ವಿಧಾನಗಳ ಮೂಲಕ ದೇವಸ್ಥಾನದ ಬಾಗಿಲು ಮುಚ್ಚಲಾಗುವುದು ಎಂದರು.

ನಟಿ ಪೂನಂ ಪಾಂಡೆ ಬಂಧನ

ಪಣಜಿ, ನ. 5: ಸರ್ಕಾರಕ್ಕೆ ಸೇರಿದ ಪ್ರದೇಶಕ್ಕೆ ಅತಿಕ್ರಮಣ ಪ್ರದೇಶವೂ ಅಲ್ಲದೇ ಅಶ್ಲೀಲ ವೀಡಿಯೋ ಚಿತ್ರೀಕರಣ ಮಾಡಿದ್ದಕ್ಕಾಗಿ ನಟಿ ಪೂನಂ ಪಾಂಡೆಯನ್ನು ಗೋವಾದಲ್ಲಿ ಪೆÇಲೀಸರು ಬಂಧಿಸಿದ್ದಾರೆ. ಗೋವಾದ ಕೆನಕೋನಾ ಟೌನ್‍ನಲ್ಲಿನ ಸರ್ಕಾರಿ ಯಂತ್ರವನ್ನು ಶೂಟಿಂಗ್‍ಗೆ ಬಳಸಿಕೊಂಡಿರುವ ಆರೋಪ ನಟಿ ಪೂನಂ ಪಾಂಡೆ ವಿರುದ್ಧ ಕೇಳಿಬಂದಿದೆ. ಕೆನಕೋನಾದ ನಾಗರಿಕರು ದೂರು ದಾಖಲಿಸಿದ ಬಳಿಕ ಪೆÇಲೀಸರು ಕ್ರಮ ಕೈಗೊಂಡಿದ್ದು, ಕರ್ತವ್ಯ ಲೋಪದ ಆರೋಪದಡಿ ಇಬ್ಬರು ಪೆÇಲೀಸ್ ಅಧಿಕಾರಿಗಳನ್ನೂ ಅಮಾನತುಗೊಳಿಸಲಾಗಿದೆ. ಪೂನಂ ಪಾಂಡೆಯನ್ನು ರಕ್ಷಿಸಿದ ಪೆÇಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೂ ಸಹ ಸ್ಥಳೀಯರು ಆಗ್ರಹಿಸಿದ್ದರು.

ಚಿರತೆ ದಾಳಿಗೆ ಯುವಕ ಬಲಿ

ಕೊಪ್ಪಳ, ನ. 5: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಚಿರತೆ ದಾಳಿಯಿಂದ 24 ವರ್ಷದ ಯುವಕ ಮೃತಪಟ್ಟಿದ್ದಾನೆ. ಆನೆಗುಂದಿಯ ದುರ್ಗಾದೇವಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ವೃತ್ತಿಯಲ್ಲಿ ಬಾಣಸಿಗನಾದ ಹುಲಿಗೇಶ್, ಇಂದು ಬೆಳಿಗ್ಗೆ ಹತ್ತಿರದ ಕಾಡಿನಲ್ಲಿ ಚಿರತೆ ದಾಳಿಯಿಂದ ಸಾವನ್ನಪ್ಪಿದ್ದಾನೆ ಎಂದು ಪೆÇಲೀಸರು ತಿಳಿಸಿದ್ದಾರೆ. ಬಹಿರ್ದೆಸೆಗಾಗಿ ಕಾಡಿಗೆ ಹೋಗಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿರುವ ಚಿರತೆ, ಸುಮಾರು 100 ಮೀಟರ್ ದೂರಕ್ಕೆ ಪೆÇದೆಗಳ ಕಡೆಗೆ ಎಳೆದೊಯ್ದಿದೆ. ಆನೆಗುಂದಿ ಮೇಗೊಟ್ ಬಳಿ ಮೃತದೇಹ ಪತ್ತೆಯಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.