ಮಡಿಕೇರಿ, ನ. 5: ಜಿಲ್ಲೆಯಲ್ಲಿ ನೂತನವಾಗಿ ಕಾರ್ಯಗತ ಗೊಳ್ಳುತ್ತಿರುವ ಪೊನ್ನಂಪೇಟೆ ತಾಲೂಕಿಗೆ ನೂತನ ತಹಶೀಲ್ದಾರ್ ಅವರನ್ನು ನೇಮಕ ಮಾಡಲು ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ನಾಗರಾಜು ಎಸ್. ಅವರು ಕೊಡಗು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಂತೆ ಪ್ರಸ್ತುತ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ತಹಶೀಲ್ದಾರ್ ಆಗಿರುವ ಕುಸುಮ ಅವರನ್ನು ಈ ಕರ್ತವ್ಯದೊಂದಿಗೆ ಪೊನ್ನಂಪೇಟೆ ತಾಲೂಕು ಕಚೇರಿಗೆ ಅಗತ್ಯವಿರುವ ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಕಾರ್ಯಗಳನ್ನು ಸಹ ನಿರ್ವಹಿಸಲು ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಅವರು ತಿಳಿಸಿದ್ದಾರೆ.